ಭಾನುವಾರ, ಜೂನ್ 13, 2021
25 °C

ಐತ್ತೂರು: 15 ದಿನಗಳಿಂದ ಕುಡಿಯುವ ನೀರಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಐತ್ತೂರು: 15 ದಿನಗಳಿಂದ ಕುಡಿಯುವ ನೀರಿಲ್ಲ

ಕಡಬ (ಉಪ್ಪಿನಂಗಡಿ): ಕಳೆದ ಹದಿನೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಐತ್ತೂರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನಾ ಪ್ರದರ್ಶನ ನಡೆಸಿದರು.ಪಂಚಾಯಿತಿ ವ್ಯಾಪ್ತಿಯ ಕೇನ್ಯ ಪ್ರದೇಶದ ನೀರಾವರಿ ಯೋಜನೆಯ ಪಂಪು ಕೆಟ್ಟು ಹೋಗಿ 15 ದಿನ ಕಳೆದಿದೆ. ಆದರೆ ಪಂಚಾಯಿತಿ ಆಡಳಿತ  ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದರೂ ಪಂಚಾಯಿತಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಸುಮಾರು 30ಕ್ಕೂ ಅಧಿಕ ಮನೆಯವರು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಶೇಷಪ್ಪ ಗೌಡ, ಗೌರವಾಧ್ಯಕ್ಷ ಕೆ.ಪಿ. ಮೋಹನ್, ಎ.ಐ.ಟಿ.ಯು.ಸಿ. ಸಂಘಟನೆಯ ರಾಮಣ್ಣ ರೈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸ್ಥಳಕ್ಕೆ ಆಗಮಿಸಿದ ಕಾರ್ಯದರ್ಶಿ ವಾಸುದೇವ ಗೌಡ ಪ್ರತಿಕ್ರಿಯಿಸಿ ಶೀಘ್ರ ಪಂಪು ದುರಸ್ತಿ ಮಾಡಿ ನೀರು ಪೂರೈಕೆ ಮಾಡಲಾಗುವುದು ಎಂದರು.ರಾಜಕೀಯ ಪ್ರೇರಿತ ಪ್ರತಿಭಟನೆ: 
4 ದಿನಗಳ ಹಿಂದೆ ಕೇನ್ಯ ನೀರು ಸರಬರಾಜು ಯೋಜನೆಯ ಪಂಪು ಕೆಟ್ಟು ಹೋಗಿ ನೀರು ಪೂರೈಕೆ ಸ್ಥಗಿತಗೊಂಡಿದೆ. ಅದನ್ನು ದುರಸ್ತಿ ಮಾಡ ಲಾಗಿದ್ದು, ಬುಧವಾರ ಸಂಜೆಯ ಹೊತ್ತಿಗೆ ನೀರು ಪೂರೈಕೆಯಾಗಲಿದೆ. ಇದರಿಂದ ಕೆಲವರು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸಿ ್ದದಾರೆ ಹೊರತು ಪ್ರತಿಭಟನೆ ನಡೆಸಿದವರು ಫಲಾನುಭವಿಗಳೇ ಅಲ್ಲ ಎಂದು ಗ್ರಾ.ಪಂ ಅಧ್ಯಕ್ಷ  ಸತೀಶ್ ಪೂಜಾರಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.