ಗುರುವಾರ , ಮೇ 6, 2021
31 °C

ಐದನೇ ಬೌಲರ್ ಕೊರತೆ ಕಾಡುತ್ತಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಯಲ್    ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯ ಐದನೇ ಅವತರಣಿಕೆಯ ಟೂರ್ನಿಯಲ್ಲಿ ಐದನೇ ಬೌಲರ್‌ನ ಕೊರತೆ ಎದುರಿಸುತ್ತಿದೆ! ಅದು ಭಾನುವಾರ ನಡೆದ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ.`ಐದನೇ ಬೌಲರ್ ಕೊರತೆ ಎಲ್ಲ ಸಮಸ್ಯೆಗಳಿಗೆ ಕಾರಣ~ ಎಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಬಳಿಕ ಆರ್‌ಸಿಬಿ ನಾಯಕ ಡೇನಿಯಲ್ ವೆಟೋರಿ ಹೇಳಿದರು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ಸ್ ಈ ಪಂದ್ಯದಲ್ಲಿ 59 ರನ್‌ಗಳ ಗೆಲುವು ಪಡೆದಿತ್ತು.ಗೆಲುವಿಗೆ 196 ರನ್‌ಗಳ ಗುರಿ ಬೆನ್ನಟ್ಟಿದ್ದ ರಾಯಲ್ ಚಾಲೆಂಜರ್ಸ್ 19.5 ಓವರ್‌ಗಳಲ್ಲಿ 136 ರನ್‌ಗಳಿಗೆ ಆಲೌಟಾಗಿತ್ತು. `ಈ ಪಂದ್ಯದಲ್ಲಿ ಕೆಲವು ಪ್ರಮುಖ ಬೌಲರ್‌ಗಳೂ ಹೆಚ್ಚು ರನ್ ಬಿಟ್ಟುಕೊಟ್ಟರು. ಆದರೆ ಐದನೇ ಬೌಲರ್‌ನ ಕೊರತೆ ಎಲ್ಲ ಸಮಸ್ಯೆಗಳಿಗೆ ಮೂಲ ಕಾರಣ. ಇದು ಟೂರ್ನಿಯ ಆರಂಭದಿಂದಲೇ ಕಾಡುತ್ತಿದೆ~ ಎಂದು ವೆಟೋರಿ ನುಡಿದರು.`ಕೊನೆಯ ಐದು ಅಥವಾ ಆರು ಓವರ್‌ಗಳಲ್ಲಿ ಎದುರಾಳಿ ತಂಡಕ್ಕೆ 100 ರನ್‌ಗಳನ್ನು ಬಿಟ್ಟುಕೊಡುವುದರಲ್ಲಿ ಅರ್ಥವಿಲ್ಲ~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.