ಐದು ಕೆಎಎಸ್ ಅಧಿಕಾರಿಗಳಿಗೆ ಬಡ್ತಿ

7

ಐದು ಕೆಎಎಸ್ ಅಧಿಕಾರಿಗಳಿಗೆ ಬಡ್ತಿ

Published:
Updated:

ಬೆಂಗಳೂರು: ಕೆಎಎಸ್ ಆಯ್ಕೆ ಶ್ರೇಣಿಯ ಐವರು ಅಧಿಕಾರಿಗಳಿಗೆ ಸೂಪರ್ ಟೈಂ ಸ್ಕೇಲ್‌ಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಡಾ. ಎಚ್. ಭೀಮಸೇನರಾವ್ ಸಿಂಧೆ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಹುಬ್ಬಳ್ಳಿ-ಧಾರವಾಡ ಟ್ರ್ಯಾನ್ಸಿಟ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಸಿ.ಎಂ.ನೂರ್ ಮನ್ಸೂರ್, ನೈರುತ್ಯ ರೈಲ್ವೆ ಯೋಜನೆಗಳ ಭೂಸ್ವಾಧೀನ ಮತ್ತು ಸಮನ್ವಯ ವಿಭಾಗದ ವಿಶೇಷ ಜಿಲ್ಲಾಧಿಕಾರಿ ಎ.ಚಂದ್ರಶೇಖರಪ್ಪ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್. ಪುರುಷೋತ್ತಮ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಅವರಿಗೆ ಬಡ್ತಿ ನೀಡಿ, ಅದೇ ಹುದ್ದೆಗಳಲ್ಲಿ ಮುಂದುವರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry