ಐದು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ...

7

ಐದು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ...

Published:
Updated:

ನವದೆಹಲಿ (ಪಿಟಿಐ): ಐದು ರಾಜ್ಯಗಳ ವಿಧಾನಸಭೆಗಳಿಗೆ ಮುಂದೆ ನಡೆಯಲಿರುವ ಚುನಾವಣೆ ವೇಳೆ ಕಪ್ಪುಹಣ ಬಳಕೆ  ಮೇಲೆ ಹದ್ದಿನಕಣ್ಣು ಇರಿಸುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.ಚುನಾವಣಾ ವೆಚ್ಚ ಮೇಲ್ವಿಚಾರಣೆ ಕುರಿತು ರಾಜಕೀಯ ಪಕ್ಷಗಳಿಗೆ ಏರ್ಪಡಿಸಿದ್ದ  ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿದ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಖುರೇಷಿ ಹೀಗೆ ಹೇಳಿದರು.ಬಿಹಾರ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಗಳಿಗೆ ಕೆಲವು ತಿಂಗಳುಗಳ ಹಿಂದೆ ನಡೆದ ಚುನಾವಣೆ ವೇಳೆ ಆದ ಅನುಭವಗಳ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಆಯೋಗ ಸಿದ್ಧಪಡಿಸಲಿರುವ ಮಾರ್ಗದರ್ಶಿ ಸೂತ್ರಗಳ ಬಗ್ಗೆ ರಾಜಕೀಯ ಪಕ್ಷಗಳು ತಮ್ಮ ವಿವಿಧ ಹಂತಗಳ ಕಾರ್ಯಕರ್ತರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಸಕ್ರಿಯವಾಗಿರುವ ವಿವಿಧ ರಾಜಕೀಯ ಪಕ್ಷಗಳ 58 ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.ಕಳೆದ ವರ್ಷ ಅಕ್ಟೋಬರ್‌ನಲ್ಲಿ ಆಯೋಗ ಏರ್ಪಡಿಸಿದ್ದ ಸರ್ವಪಕ್ಷಗಳ ಸಭೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಚುನಾವಣೆಯಲ್ಲಿ ಕಪ್ಪುಹಣದ ಬಳಕೆ ಹಾಗೂ `ಕಾಸಿಗಾಗಿ ಸುದ್ದಿ~ ಪಿಡುಗುಗಳನ್ನು ನಿಯಂತ್ರಿಸಲು ಕೋರಿದ್ದರು ಎಂದು ಖುರೇಷಿ ಇದೇ ವೇಳೆ ತಿಳಿಸಿದರು.ಚುನಾವಣಾ ಆಯುಕ್ತರಾದ ವಿ.ಎಸ್.ಸಂಪತ್ ಮತ್ತು ಎಚ್.ಎಸ್.ಬ್ರಹ್ಮ ಅವರೂ ಇದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry