ಮಂಗಳವಾರ, ಜೂನ್ 22, 2021
22 °C

ಐಪಿಎಲ್‌: ಚಾಂಡಿಲಗೆ ಹೆಚ್ಚಿನ ಕಾಲಾವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಐಪಿಎಲ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿ ನಡೆದ ‘ಸ್ಪಾಟ್‌ ಫಿಕ್ಸಿಂಗ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ ಪ್ರತಿಕ್ರಿಯೆ ನೀಡಲು ಅಜಿತ್‌ ಚಾಂಡಿಲಗೆ ಬಿಸಿಸಿಐ ಹೆಚ್ಚಿನ ಕಾಲಾವಕಾಶ ನೀಡಿದೆ.ರಾಜಸ್ತಾನ ರಾಯಲ್ಸ್‌ ತಂಡದ ಮಾಜಿ ಆಟಗಾರ ಚಾಂಡಿಲ ಐಪಿಎಲ್‌ನ ಆರನೇ ಋತುವಿನ ಟೂರ್ನಿಯಲ್ಲಿ ‘ಸ್ಪಾಟ್‌ ಫಿಕ್ಸಿಂಗ್‌’ನಲ್ಲಿ ಭಾಗಿಯಾಗಿದ್ದರು. ರವಿ ಸವಾನಿ ನೇತೃತ್ವದ ಬಿಸಿಸಿಐ ಭ್ರಷ್ಟಾಚಾರ ತಡೆ ಘಟಕ ನಡೆಸಿದ್ದ ತನಿಖೆಯಲ್ಲಿ ಚಾಂಡಿಲ ತಪ್ಪಿತಸ್ಥ ಎಂಬುದು ಸಾಬೀತಾಗಿತ್ತು.ಚಾಂಡಿಲ ಬುಧವಾರ ಬಿಸಿಸಿಐ ಅಧ್ಯಕ್ಷ ಎನ್‌. ಶ್ರೀನಿವಾಸನ್‌, ರಾಜೀವ್‌ ಶುಕ್ಲಾ ಮತ್ತು ಶಿವಲಾಲ್‌ ಯಾದವ್‌ ಅವರನ್ನೊಳಗೊಂಡ ಶಿಸ್ತು ಸಮಿತಿಯ ಮುಂದೆ ಹಾಜರಾದರು. ಈ ವೇಳೆ ಅಂತಿಮ ಪ್ರತಿಕ್ರಿಯೆ ನೀಡಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಕೋರಿದರು.

‘ಚಾಂಡಿಲ ಅವರ ಕೋರಿಕೆಯನ್ನು ಶಿಸ್ತು ಸಮಿತಿ ಒಪ್ಪಿದೆ. ಲಿಖಿತ ಪ್ರತಿಕ್ರಿಯೆ ನೀಡಲು ಮಾರ್ಚ್‌ 12ರ ವರೆಗೆ ಅವಕಾಶ ನೀಡಿದೆ’ ಎಂದು ಮಂಡಳಿಯ ಕಾರ್ಯದರ್ಶಿ ಸಂಜಯ್‌ ಪಟೇಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಚಾಂಡಿಲ ಅಲ್ಲದೆ ಎಸ್‌. ಶ್ರೀಶಾಂತ್‌, ಅಂಕಿತ್‌ ಚವಾಣ್‌, ಅಮಿತ್‌ ಸಿಂಗ್‌ ಮತ್ತು ಸಿದ್ಧಾರ್ಥ್‌ ತ್ರಿವೇದಿ ಅವರೂ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ತಪ್ಪಿತಸ್ಥರು ಎಂಬುದು ಸಾಬೀತಾಗಿತ್ತು. ಬಿಸಿಸಿಐ ಶಿಸ್ತು ಸಮಿತಿ ಶ್ರೀಶಾಂತ್‌ ಮತ್ತು ಚವಾಣ್‌ ಮೇಲೆ ಆಜೀವ ನಿಷೇಧ ಹೇರಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.