ಭಾನುವಾರ, ಜೂನ್ 20, 2021
20 °C

ಐಪಿಎಲ್‌: ಮೂರು ದಿನಗಳಲ್ಲಿ ಅಂತಿಮ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಏಳನೇ ಋತುವಿನ ಟ್ವೆಂಟಿ-20 ಟೂರ್ನಿಯ ತಾಣದ ಬಗ್ಗೆ ಇನ್ನು ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.‘ಭಾರತದಲ್ಲಿ ಎಷ್ಟು ಪಂದ್ಯಗಳನ್ನು ನಡೆಸಲು ಸಾಧ್ಯ ಎಂಬುದನ್ನು ಮೊದಲು ಅರಿಯುವುದು ನಮ್ಮ ಗುರಿ. ಅದಕ್ಕಾಗಿ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಮೂರು ದಿನಗಳಲ್ಲಿ ನಮಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.ಆ ಬಳಿಕ ಐಪಿಎಲ್‌ನ ತಾಣ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದೇವೆ’ ಎಂದು ಐಪಿಎಲ್‌ ಮುಖ್ಯಸ್ಥ ರಂಜಿಬ್‌ ಬಿಸ್ವಾಲ್‌ ಸೋಮವಾರ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯ ಕಾರಣ ಐಪಿಎಲ್‌ನ ಕೆಲವು ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.