ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಆಶಿಶ್ ನೆಹ್ರಾ

Last Updated 19 ಮೇ 2016, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಂಡಿನೋವಿನಿಂದ ಬಳಲುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೇಗದ ಬೌಲರ್ ಆಶಿಶ್‌ ನೆಹ್ರಾ ಈ ಬಾರಿಯ ಐಪಿಎಲ್‌ ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಎಡಗೈ ವೇಗಿ ನೆಹ್ರಾ ಗಂಭೀರವಾಗಿ ಗಾಯವಾಗಿರುವ ಕಾರಣ ಅವರು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಆಡುವುದು ಅನುಮಾನವಿದೆ. ಒಂಬತ್ತನೇ ಆವೃತ್ತಿಯಲ್ಲಿ ಸನ್‌ ರೈಸರ್ಸ್ ತಂಡ ಆಡಿದ ಒಟ್ಟು 12 ಪಂದ್ಯಗಳಲ್ಲಿ ನೆಹ್ರಾ ಎಂಟರಲ್ಲಿ ಆಡಿದ್ದಾರೆ.  ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ನೆಹ್ರಾ 17 ಟೆಸ್ಟ್‌, 120 ಏಕದಿನ ಮತ್ತು 23 ಅಂತರರಾಷ್ಟ್ರೀಯ ಟ್ವೆಂಟಿ–20 ಪಂದ್ಯಗಳನ್ನು ಆಡಿದ್ದಾರೆ. ಭಾರತದಲ್ಲಿ ಇತ್ತೀಚಿಗೆ ನಡೆದ ವಿಶ್ವ ಚುಟುಕು ಕ್ರಿಕೆಟ್‌ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT