ಶುಕ್ರವಾರ, ಜುಲೈ 30, 2021
28 °C

ಐಪಿಎಲ್ ಸ್ಪಾಟ್ ಫಿಕ್ಸಿಂಗ್: ದಾವೂದ್, ಶಕೀಲ್ ವಿರುದ್ಧ ವಾರೆಂಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ) :  ಐಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಧಿಸಿದಂತೆ ದಾವೂದ್ ಇಬ್ರಾಹಿಂ, ಮತ್ತು ಛೋಟಾ ಶಕೀಲ್ ವಿರುದ್ಧ ದೆಹಲಿ ನ್ಯಾಯಾಲಯವು ಮಂಗಳವಾರ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ. ದೆಹಲಿ ಪೊಲೀಸರು ಐಪಿಎಲ್ ಮೋಸದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದ ಎಲ್ಲಾ 28 ಮಂದಿಯೂ ದಾವೂದ್ ಇಬ್ರಾಹಿಂ, ಮತ್ತು ಛೋಟಾ ಶಕೀಲ್ ಅವರ ಆಣತಿಯಂತೆ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದರು. ಹಾಗಾಗಿ ಭೂಗತ ದೊರೆ ದಾವೂದ್ ಹಾಗೂ ಶಕೀಲ್ ವಿರುದ್ದ ಜಾಮೀನು ರಹಿತ ವಾರೆಂಟ್ ಹೊರಡಿಸಬೇಕೆಂದು ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶರಾದ ರಾಜ್ ರಾಣಿ ಮಿತ್ರ ಅವರು ಜಾಮೀನು ರಹಿತ ಬಂಧನ ವಾರೆಂಟ್‌ನ್ನು ಹೊರಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.