ಗುರುವಾರ , ಮೇ 13, 2021
31 °C

ಐಪಿಎಲ್: ಹೆಚ್ಚುವರಿ ಬಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂ ಗಣದಲ್ಲಿ ಇದೇ ಏಳು ಹಾಗೂ ಹತ್ತ ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ವೀಕ್ಷಣೆಗಾಗಿ ಬರುವ ಕ್ರೀಡಾಭಿಮಾನಿಗಳಿಗೆ ಅನು ಕೂಲಕ್ಕಾಗಿ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಯು ಹೆಚ್ಚುವರಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಂದ್ಯಾವಳಿಯ ದಿನಗಳಂದು ಪಂದ್ಯ ವೀಕ್ಷಣೆಗೆ ಬರುವ ಸಾರ್ವ ಜನಿಕರು ಕ್ರೀಡಾಂಗಣಕ್ಕೆ ಸಂಜೆ ನಾಲ್ಕು ಗಂಟೆಗೆ ತಲುಪುವಂತೆ ನಗ ರದ ವಿವಿಧ ಭಾಗಗಳಿಂದ ಹೆಚ್ಚುವರಿ ಬಸ್‌ಗಳು ಹೊರಡಲಿವೆ. ಚಿನ್ನಸ್ವಾಮಿ ಕ್ರೀಡಾಂಗ ಣಕ್ಕೆ ಬರುವ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಪಂದ್ಯಗಳ ಟಿಕೆಟ್ ವಿತರಣೆಯ ಆಧಾರದ ಮೇಲೆ ಬಸ್ಸುಗಳು ಸಂಚರಿಸಲಿವೆ.ಕ್ರಿಕೆಟ್ ಪಂದ್ಯ ಮುಗಿದ ನಂತ ರವೂ ತಮ್ಮ ಸ್ಥಳಗಳಿಗೆ ತೆರಳಲು ಅನುಕೂಲ ವಾಗುವಂತೆ ನಗರದ ವಿವಿಧ ಭಾಗ ಗಳಿಗೆ ಬಿಗ್-10 ಮಾರ್ಗಗಳಲ್ಲಿ ಹೆಚ್ಚು ವರಿ ಬಸ್ಸುಗಳ ಸಂಚಾರ ವ್ಯವಸ್ಥೆ ಮಾಡ ಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.