ಶನಿವಾರ, ನವೆಂಬರ್ 23, 2019
18 °C

ಐಪಿಎಲ್ 6ನೇ ಆವೃತ್ತಿಗೆ ಚಾಲನೆ

Published:
Updated:

ಕೋಲ್ಕತ್ತ:  ಸಾಲ್ಟ್‌ಲೇಕ್ ಕ್ರೀಡಾಂಗಣದಲ್ಲಿ ಮಂಗಳವಾರ ಇರುಳು ದೀಪಗಳ ಹಬ್ಬ. ಮನಮೋಹಕ ನೃತ್ಯ ಸಂಭ್ರಮ ದಲ್ಲಿ ಸಹಸ್ರಾರು ಮಂದಿ ಮಿಂದು ಎದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರನೇ ಆವೃತ್ತಿಯ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನೆರವೇರಿತು.ನಟ ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್, ನಟಿಯರಾದ ಕತ್ರಿನಾ ಕೈಫ್ ಹಾಗೂ ದೀಪಿಕಾ ಪಡುಕೋಣೆ ಮಾಡಿದ ನೃತ್ಯಕ್ಕೆ ಕ್ರಿಕೆಟ್ ಪ್ರಿಯರು ಕುಳಿತಲ್ಲಿಯೇ ಹೆಜ್ಜೆ ಹಾಕಿದರು. ಬುಧವಾರ ನಡೆಯಲಿರುವ ಉದ್ಘಾಟನಾ ಪಂದ್ಯ ದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಡೇರ್‌ಡೆವಿಲ್ಸ್ ತಂಡಗಳು ಪೈಪೋಟಿ ನಡೆಸಲಿವೆ.

ಪ್ರತಿಕ್ರಿಯಿಸಿ (+)