ಭಾನುವಾರ, ಜೂನ್ 13, 2021
21 °C

ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ನಿಯಮ: ಹೈಕೋರ್ಟ್‌ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಪಿಎಸ್‌ ಅಧಿಕಾರಿಗಳಿಗೆ ಒಂದು ಸ್ಥಳದಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸುವಂತೆ ನಿಯಮ ರೂಪಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಇದಕ್ಕೆ ಪ್ರತಿಹೇಳಿಕೆ ಸಲ್ಲಿಸುವಂತೆ ಹೈಕೋರ್ಟ್‌ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.‘ಐಪಿಎಸ್‌ ಅಧಿಕಾರಿಗಳು ಒಂದು ಸ್ಥಳದಲ್ಲಿ ಕನಿಷ್ಠ ಎರಡು ವರ್ಷ ಕರ್ತವ್ಯ ನಿರ್ವಹಿಸಬೇಕು ಎಂದು ನಿಯಮ ರೂಪಿಸಿದೆ. ಅದರಂತೆ ರಾಜ್ಯ ಸರ್ಕಾರ ಐಎಫ್‌ಎಸ್‌ (ಭಾರತೀಯ ಅರಣ್ಯ ಸೇವೆ) ಮತ್ತು ಐಎಎಸ್‌ (ಭಾರತೀಯ ಆಡಳಿತ ಸೇವೆ) ಅಧಿಕಾರಿಗಳು ಒಂದು ಸ್ಥಳದಲ್ಲಿ ಕನಿಷ್ಠ ಎರಡು ವರ್ಷ ಕರ್ತವ್ಯ ನಿರ್ವಹಿಸಲು ಅನುವು ಮಾಡುವ ನಿಯಮ ರೂಪಿಸಿದೆ. ಆದರೆ ಐಪಿಎಸ್‌ (ಭಾರತೀಯ ಪೊಲೀಸ್‌ ಸೇವೆ) ಅಧಿಕಾರಿಗಳಿಗೆ ಇದು ಅನ್ವಯ ಆಗದಂತೆ ಮಾಡಿದೆ’ ಎಂದು ಸಾಯಿದತ್ತ ಭಟ್ಟ ಎಂಬುವವರು ಸಲ್ಲಿಸಿರುವ ಅರ್ಜಿಯಲ್ಲಿ ದೂರಲಾಗಿದೆ.‘ಚುನಾವಣೆ ಹತ್ತಿರದಲ್ಲಿದೆ. ಐಪಿಎಸ್‌ ಅಧಿಕಾರಿಗಳು ಒಂದು ಸ್ಥಳದಲ್ಲಿ ಕನಿಷ್ಠ ಎರಡು ವರ್ಷ ಕರ್ತವ್ಯ ನಿರ್ವಹಿಸಬೇಕು ಎಂಬ ನಿಯಮ ಇಲ್ಲದ ಕಾರಣ, ಆಯಕಟ್ಟಿನ ಜಾಗಗಳಿಗೆ ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗ ಮಾಡಲು ರಾಜಕಾರಣಿಗಳಿಗೆ ಅವಕಾಶ ಆಗುತ್ತದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಭಂಗ ಬರುತ್ತದೆ’ ಎಂದೂ ವಾದಿಸಲಾಗಿದೆ. ವಿಚಾರಣೆಯನ್ನು ಏಪ್ರಿಲ್‌ 7ಕ್ಕೆ ಮುಂದೂಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.