ಐಸಿಎಸ್‌ಇ, ಐಎಸ್‌ಸಿ ಫಲಿತಾಂಶ ಪ್ರಕಟ: ಬಾಲಕಿಯರ ಮೇಲುಗೈ

7

ಐಸಿಎಸ್‌ಇ, ಐಎಸ್‌ಸಿ ಫಲಿತಾಂಶ ಪ್ರಕಟ: ಬಾಲಕಿಯರ ಮೇಲುಗೈ

Published:
Updated:

ನವದೆಹಲಿ (ಪಿಟಿಐ): ಈ ವರ್ಷದ ಐಸಿಎಸ್‌ಇ ಹತ್ತನೇ ತರಗತಿ ಮತ್ತು ಐಎಸ್‌ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.ಐಸಿಎಸ್‌ಇ ಪರೀಕ್ಷೆಯಲ್ಲಿ ಶೇಕಡ 99.15ರಷ್ಟು ಬಾಲಕಿಯರು ತೇರ್ಗಡೆ ಹೊಂದಿದ್ದಾರೆ. ಶೇಕಡ 98.19ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ.ಐಎಸ್‌ಸಿ ಪರೀಕ್ಷೆಯಲ್ಲಿ ಶೇಕಡ 98.35ರಷ್ಟು ಬಾಲಕಿಯರು, ಶೇಕಡ 96.36ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಈ ವರ್ಷ ಒಟ್ಟು 1,32,282 ವಿದ್ಯಾರ್ಥಿಗಳು ಐಸಿಎಸ್‌ಇ ಹತ್ತನೇ ತರಗತಿ ಪರೀಕ್ಷೆ ಬರೆದಿದ್ದರು. ಒಟ್ಟು  59,356 ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆ ತೆಗೆದುಕೊಂಡಿದ್ದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry