ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ (ಐಸಿಡಿಎಸ್) ಅವ್ಯವಹಾರ ನಡೆಸಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಶಮ್ಲಾ ಇಕ್ಬಾಲ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿ ಉಷಾ ಪಟ್ವಾರಿ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ಮೊಕದ್ದಮೆಗಳನ್ನು ದಾಖಲಿಸಿದ್ದಾರೆ.

ಮಾರ್ಚ್ 9ರಂದು ಐಸಿಡಿಎಸ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೊದಲ ಮೊಕದ್ದಮೆ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಆರೋಪಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಶಮ್ಲಾ ಇಕ್ಬಾಲ್ ಮತ್ತು ಉಷಾ ಪಟ್ವಾರಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ಶಮ್ಲಾ ವಿರುದ್ಧ ವಾರದ ಹಿಂದೆ ಪ್ರತ್ಯೇಕ ಮೊಕದ್ದಮೆ ದಾಖಲಿಸಲಾಗಿತ್ತು. ಮಂಗಳವಾರ ಉಷಾ ಪಟ್ವಾರಿ ವಿರುದ್ಧ ಮತ್ತೊಂದು ಮೊಕದ್ದಮೆ ದಾಖಲಿಸಲಾಗಿದೆ.ಮಹಿಳೆಯರು ಮತ್ತು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಐಸಿಡಿಎಸ್ ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಮೇಲೆ ತನಿಖೆ ಆರಂಭಿಸಲಾಗಿತ್ತು.

ಈ ಸಂಬಂಧ ದಾಖಲಿಸಿರುವ ಮೊಕದ್ದಮೆಗಳ ಸಂಖ್ಯೆ ಈಗ ಮೂರಕ್ಕೇರಿದೆ. ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮುನಿರಾಜು ಅವರನ್ನು ಇದೇ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ತನಿಖೆಯನ್ನು ಚುರುಕುಗೊಳಿಸುವ ಉದ್ದೇಶದಿಂದ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆರೋಪಿ ಅಧಿಕಾರಿಗಳು ಅಕ್ರಮ ಆಸ್ತಿ ಹೊಂದಿರುವ ಪ್ರಕರಣದ ಬಗ್ಗೆ ಒಂದು ತಂಡ ತನಿಖೆ ನಡೆಸಲಿದೆ. ಮತ್ತೊಂದು ತಂಡ ಯೋಜನೆಯಲ್ಲಿನ ಅವ್ಯವಹಾರದ ಕುರಿತು ತನಿಖೆ ಕೈಗೊಳ್ಳಲಿದೆ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ.

ಸಾಕಷ್ಟು ಸಾಕ್ಷ್ಯಾಧಾರ: ಆರೋಪಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೇ ತನಿಖಾ ತಂಡ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಸ್ಥಿರಾಸ್ತಿ ಒಡೆತನದ ದಾಖಲೆಗಳು, ಬ್ಯಾಂಕ್ ಖಾತೆ ಪುಸ್ತಕಗಳು, ಷೇರು ಮತ್ತು ಇತರೆ ಹೂಡಿಕೆ ಪ್ರಮಾಣ ಪತ್ರಗಳು, ಲಾಕರ್ ಕೀಲಿಗಳನ್ನು ವಶಕ್ಕೆ ಪಡೆಯಲಾಗಿತ್ತು.

ಹದಿನೈದು ದಿನಗಳಿಗೂ ಹೆಚ್ಚು ಕಾಲ ಈ ದಾಖಲೆಗಳನ್ನು ಪರಿಶೀಲನೆ ನಡೆಸಿದ ತನಿಖಾ ತಂಡ, ಆರೋಪಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದನ್ನು ಖಚಿತಪಡಿಸಿಕೊಂಡಿದೆ. ನಂತರವೇ ಈ ಸಂಬಂಧ ಮೊಕದ್ದಮೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.