ಮಂಗಳವಾರ, ಮೇ 11, 2021
26 °C

ಐಸಿಸಿ ಏಕದಿನ ರ‌್ಯಾಂಕಿಂಗ್ ಕುಸಿದ ಭಾರತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಯಾವುದೇ ಗೆಲುವು ಪಡೆಯಲು ವಿಫಲವಾದ ಕಾರಣ ಭಾರತ ತಂಡ ಐಸಿಸಿ ಏಕದಿನ ರ‌್ಯಾಂಕಿಂಗ್‌ನಲ್ಲಿ ಕುಸಿತ ಅನುಭವಿಸಿದೆ.ಮಹೇಂದ್ರ ಸಿಂಗ್ ದೋನಿ ಬಳಗ ಇದೀಗ ಐದನೇ ಸ್ಥಾನದಲ್ಲಿದೆ. ಭಾರತ ರ‌್ಯಾಂಕಿಂಗ್ ಪಟ್ಟಿಯಲ್ಲಿ ಇಷ್ಟೊಂದು ಕೆಳಗಿನ ಸ್ಥಾನ ಪಡೆದದ್ದು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇದೇ ಮೊದಲು.`2008ರ ಅಕ್ಟೋಬರ್‌ನಲ್ಲಿ ಭಾರತ ರ‌್ಯಾಂಕಿಂಗ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿತ್ತು. ಆ ಬಳಿಕ ದೋನಿ ಬಳಗ ಇಷ್ಟೊಂದು ಕೆಳಗಿನ ಸ್ಥಾನ ಪಡೆದದ್ದು ಇದೇ ಮೊದಲು. ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ ತಂಡ ಇಂಗ್ಲೆಂಡ್ ಎದುರು 0-4 ರಲ್ಲಿ ಸೋಲು ಅನುಭವಿಸಿದ್ದ ಕಾರಣ ಮೂರನೇ ಸ್ಥಾನಕ್ಕೆ ಕುಸಿತ ಕಂಡಿತ್ತು~ ಎಂದು ಐಸಿಸಿಯ ಹೇಳಿಕೆ ತಿಳಿಸಿದೆ.  ಇಂಗ್ಲೆಂಡ್ ವಿರುದ್ಧದ ಸರಣಿಗೆ ಮುನ್ನ ಭಾರತ ಏಕದಿನ ರ‌್ಯಾಂಕಿಂಗ್ ಪಟ್ಟಿಯಲ್ಲಿ  ಮೂರನೇ ಸ್ಥಾನದಲ್ಲಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.