ಮಂಡ್ಯ: `ನಾನು ಬಿಜೆಪಿ ಬಿಟ್ಟು ಹೋದರೂ ಬಿಜೆಪಿ ಇರುತ್ತೆ; ಇನ್ನೊಬ್ಬರು ಬಿಟ್ಟು ಹೋದರೂ ಬಿಜೆಪಿ ಇರುತ್ತೆ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದ ವರೆಗೂ ಪಕ್ಷದಲ್ಲಿ ಗೊಂದಲಗಳಿವೆ. ಹೊಂದಾಣಿಕೆ ಕೊರತೆ ಕಾಡುತ್ತಿದೆ. ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡದಿದ್ದರೆ, ಪಕ್ಷಕ್ಕೆ ಉಳಿಗಾಲವಿಲ್ಲ ಎಂದರು.

ಜನಪ್ರತಿನಿಧಿಗಳು ಇಲ್ಲದ್ದರಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದರೂ, ಹೇಳಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

ಕೆಆರ್ಎಸ್ ಜಲಾಶಯ ವ್ಯಾಪ್ತಿಯ ನಾಲೆಗಳನ್ನು 300 ಕೋಟಿ ರೂಪಾಯಿ ವೆಚ್ಚದಲ್ಲಿ ದುರಸ್ತಿ ಮಾಡಲಾಗುವುದು. ದುರಸ್ತಿ ಕಾಮಗಾರಿ ಉದ್ಘಾಟನಾ ಸಮಾರಂಭವನ್ನು ನ.29ರಂದು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

ಇಲ್ಲಿ ಪಕ್ಷ ಕಟ್ಟುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ನಾನಾಗಿಯೇ ವಹಿಸಿಕೊಂಡಿದ್ದೇನೆ. ಮುಂದಿನ ವಾರದಿಂದ ವಿಧಾನಸಭೆ ಕ್ಷೇತ್ರವಾರು ಸಭೆ ನಡೆಸುತ್ತೇನೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರೋಣ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ಅಡುಗೆ ಅನಿಲ, ಪೆಟ್ರೋಲ್ ಬೆಲೆಯನ್ನು ಏರಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತದೆ ಎಂದು ಟೀಕಿಸಿದರು.

ನಾನು ತಪ್ಪು ಮಾಡಿದ್ದರೆ, ಜನರು ನಮ್ಮನ್ನು ಶಿಕ್ಷಿಸುತ್ತಾರೆ. ಆದರೆ, ಪ್ರತಿಪಕ್ಷದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಆಡಳಿತದಲ್ಲಿದ್ದಾಗ ಏನು ಮಾಡಿದ್ದವು ಎನ್ನುವುದನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಮಹೇಶ್ ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಜಿಲ್ಲೆಯಲ್ಲಿಯೂ ಕಮಲವನ್ನು ಅರಳಿಸೋಣ ಎಂದರು.

ಕಾಡಾ ಅಧ್ಯಕ್ಷ ಡಿ. ರಾಮಲಿಂಗಯ್ಯ, ಮುಡಾ ಅಧ್ಯಕ್ಷ ಬಸವೇಗೌಡ, ಪಕ್ಷದ ರಾಜ್ಯ ಕಾರ್ಯದರ್ಶಿ ಶರ್ವಾಣಿ ಸದಾಶಿವ, ಬಿ.ಟಿ. ಶ್ರೀನಿವಾಸಗೌಡ, ಸುರೇಶಬಾಬು, ಪಟೇಲ್ ಕೆ.ಸಿ. ನಾಗರಾಜು ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.