ಕರ್ನಾಟಕ ಲೋಕ ಸೇವಾ ಆಯೋಗವು ದಿನಾಂಕ 6-9-2010ರ ಅಧಿಸೂಚನೆಯಲ್ಲಿ ಸೂಚಿಸಿದ ವಿವಿಧ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ (ಹಾಸ್ಟೆಲ್ ವಾರ್ಡನ್) ಸಂಬಂಧಿಸಿದಂತೆ ಇದೇ ತಿಂಗಳ 23ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಷ್ಟೇ.

ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಿಗೆ ಒಟ್ಟು 135 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರೂ ಈ ಹುದ್ದೆಗಳಿಗೆ ಒಂದೇ ವಿದ್ಯಾರ್ಹತೆ, ಪಠ್ಯ ಕ್ರಮ ಇರುವುದರಿಂದ ಒಂದೇ ಪ್ರವೇಶ ಪತ್ರವನ್ನು ಹಾಗೂ ಒಂದೇ ಪರೀಕ್ಷಾ ಕೇಂದ್ರವನ್ನು ನೀಡಲಾಗಿದೆ. ಆದರೆ ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರೂ ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸೂಚನೆ ನೀಡಲಾಗಿದೆ.

ಏಕಕಾಲದಲ್ಲಿ ಎರಡು ಹುದ್ದೆಗಳಿಗೆ ಬೇರೆ ಬೇರೆ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಹೇಗೆ ಪರೀಕ್ಷೆ ಬರೆಯಲು ಸಾಧ್ಯ ಎಂಬುದನ್ನು ಲೋಕಸೇವಾ ಆಯೋಗವು ಮನಗಂಡು ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ (2 ಹುದ್ದೆಗಳು) ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.