ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

7

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

Published:
Updated:

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಕೌಟುಂಬಿಕ ಕಲಹದಿಂದ ಬೇಸತ್ತ ಅನಿಲ್ ಮಾರುತಿ ಸುತಾರ ಅವರ ಪತ್ನಿ ಸಾರಿಕಾ (23) ಮಕ್ಕಳಾದ ಓಂ  (4) ಹಾಗೂ ಒಂದೂವರೆ ವರ್ಷದ ಗೌರಿಯೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಅನಿಲ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಅನಿಲ ಸುತಾರ ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದ್ದು ಆಗಾಗ್ಗೆ ಇದೇ ವಿಚಾರಕ್ಕೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತ ಸಾರಿಕಾ, ತವರು ಮನೆಗೆ ಹೋಗುವುದಾಗಿ ಹೇಳಿ, ಶನಿವಾರ ಎರಡೂ ಮಕ್ಕಳನ್ನು ಕರೆದುಕೊಂಡು ಹೋಗಿದ್ದರು. ಆದರೆ ಮಂಗಳವಾರ ಬೆಳಿಗ್ಗೆ ದೂಧಗಂಗಾ ನದಿಯಲ್ಲಿ ತಾಯಿ ಮತ್ತು ಮಕ್ಕಳ ಶವಗಳು ಪತ್ತೆಯಾಗಿವೆ. ಈ ಕುರಿತು ಸದಲಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry