ಶುಕ್ರವಾರ, ಏಪ್ರಿಲ್ 16, 2021
20 °C

ಒಕ್ಕಲೆಬ್ಬಿಸದಿರಲು ಕಾಂಗ್ರೆಸ್ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೊರಬ: ಅರಣ್ಯ ಒತ್ತುವರಿದಾರರನ್ನು ಒಕ್ಕಲೆಬ್ಬಿಸದಂತೆ ಒತ್ತಾಯಿಸಿ ಸೋಮವಾರ ಸೊರಬ ವಿಧಾನಸಭಾ ಯುವ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕಿನಲ್ಲಿ ಸಾವಿರಾರು ಕುಟುಂಬಗಳು ಅರಣ್ಯ ಭೂಮಿಯಲ್ಲಿ ವಾಸವಾಗಿ ಜೀವನ ಸಾಗಿಸುತ್ತಿದ್ದಾರೆ. 1978ರ ಏ. 27ಕ್ಕಿಂತ ಪೂರ್ವದಲ್ಲಿ ಅರಣ್ಯ ಒತ್ತುವರಿ ಮಾಡಿ ವಾಸವಾಗಿರುವವರಿಗೆ ಹಕ್ಕುಪತ್ರ ನೀಡಲು ಕಾನೂನಿನಲ್ಲಿ ಅವಕಾಶ ಇದ್ದರೂ ಬಂಡವಾಳ ಶಾಹಿರಾಜ್ಯ ಸರ್ಕಾರ ಬಡವರನ್ನು ಒಕ್ಕಲೆಬ್ಬಿಸಲು ಮುಂದಾಗಿದೆ ಎಂದು ದೂರಿದರು.

ಈ ಭೂಮಿಯಲ್ಲಿ ವಾಸದ ಮನೆ ನಿರ್ಮಿಸಿಕೊಂಡು ತಲೆತಲಾಂತರದಿಂದ ವಾಸವಾಗಿದ್ದರೂ ಕೇವಲ 508 ಪ್ರಕರಣವನ್ನು ಗುರುತಿಸಿ ಅದರಲ್ಲಿ 92 ಪ್ರಕರಣ ಮಾತ್ರ ಸಕ್ರಮಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅರಣ್ಯ ಭೂಮಿ ಒತ್ತುವರಿ ಮಾಡಿ ಗುಡಿಸಲಿನಲ್ಲಿ ವಾಸವಾಗಿರುವ 1978ರ ಮುಂಚಿನ ಪ್ರಕರಣ ಗುರುತಿಸಿ ಕೂಡಲೇ ಹಕ್ಕುಪತ್ರ ನೀಡಬೇಕು. ಆಶ್ರಯ, ಅಂಬೇಡ್ಕರ್, ಇಂದಿರಾ ಇನ್ನಿತರ ವಸತಿ ಯೋಜನೆಯ ಅನುಕೂಲ ಕಲ್ಪಿಸಬೇಕು ಮತ್ತು ಈಗಾಗಲೇ ಒತ್ತುವರಿ ಮಾಡಿ ಬಡಜನರನ್ನು, ಕೂಲಿಕಾರ್ಮಿಕರನ್ನು ಒಕ್ಕಲೆಬ್ಬಿಸಬಾರದು ಹಾಗೂ ಒತ್ತುವರಿ ತೆರವುಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕರುಣಾಕರ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಧುಕೇಶ್ವರ, ಪ್ರಧಾನ ಕಾರ್ಯದರ್ಶಿ ಕಿರಣ ಕುಮಾರ, ತಾರಾಮೂರ್ತಿ ಸಾಗರ, ರಾಜು ಓಟೂರು, ಉಲ್ಲಾಸ, ಉಮೇಶ ಶಾಂತಗೇರಿ, ಉಮೇಶ ಬೆದವಟ್ಟಿ, ಪ್ರಕಾಶ ಕಾಸ್ವಾಡಿಕೊಪ್ಪ, ಮಹೇಂದ್ರ ಹಳೇಸೊರಬ, ತಾರಕೇಶ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.