ಗುರುವಾರ , ಜೂನ್ 17, 2021
29 °C

ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ: ಪುಟ್ಟರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಜೆಡಿಎಸ್‌ನಲ್ಲಿದ್ದ ಸಣ್ಣ, ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಅಭ್ಯರ್ಥಿ ಸಿ.ಎಸ್‌. ಪುಟ್ಟರಾಜು ಹೇಳಿದರು.ನಗರದಲ್ಲಿ ಶನಿವಾರ ನಡೆದ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಯ ಚುನಾವಣೆ ಫಲಿತಾಶಂ ಮರುಕಳಿಸಬಾರದು ಎಂಬ ಕಾರಣಕ್ಕೆ ಅಭ್ಯರ್ಥಿಯ ಆಯ್ಕೆಯನ್ನು ಮುಂದೂಡಲಾಗಿತ್ತು. ಒಮ್ಮತದ ಅಭಿಪ್ರಾಯದ ಮೇರೆಗೆ ನಾನು ಅಭ್ಯರ್ಥಿಯಾಗಿದ್ದೇನೆ. ಚಲುವರಾಯಸ್ವಾಮಿ ಸೇರಿದಂತೆ ಎಲ್ಲ ಶಾಸಕರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದರು.ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್ ಮಾತನಾಡಿ, ಅತಿಯಾದ ಆತ್ಮವಿಶ್ವಾಸದಿಂದ ಸೋಲನ್ನು ಅನುಭವಿಸಿದ್ದೆವು. ಈ ಬಾರಿ ಅದು ಮತ್ತೆ ಮರುಕಳಿಸಿದಂತೆ ಎಲ್ಲರೂ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದರು.ಮಾಜಿ ಶಾಸಕ ಜಿ.ಬಿ. ಶಿವಕುಮಾರ್ ಮಾತನಾಡಿ, ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಐದು ಮಂದಿ ಶಾಸಕರಿದ್ದಾರೆ. ಇಬ್ಬರು ವಿಧಾನ ಪರಿತ್ ಸದಸ್ಯರಿದ್ದಾರೆ. ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿದರೆ ಗೆಲುವು ಸುಲಭವಾಗಲಿದೆ ಎಂದು ಹೇಳಿದರು.ವಿಧಾನ ಪರಿಷತ್‌ ಸದಸ್ಯ ಬಿ. ರಾಮಕೃಷ್ಣ, ಮಾಜಿ ಶಾಸಕ ಎಂ. ಶ್ರೀನಿವಾಸ್, ಸಿದ್ದರಾಮೇಗೌಡ, ಮಂಜುಳಾ ಉದಯಶಂಕರ್.      ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಶಿವರಾಮು, ಜಿ.ಪಂ ಉಪಾಧ್ಯಕ್ಷ ಕಿಕ್ಕೇರಿ ಪ್ರಭಾಕರ್, ಶಶಿಧರ್ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.