ಭಾನುವಾರ, ಜೂನ್ 20, 2021
29 °C

ಒಗ್ಗಟ್ಟಿನಿಂದ ಪಕ್ಷ ಸಂಘಟಿಸಲು ಜೆಡಿಎಸ್ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ: `ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸಲು ಮುಂದಾಗಬೇಕು~ ಎಂದು ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಕರೆ ನೀಡಿದರು.ನಗರದ ಬಾಗಲಗುಂಟೆಯಲ್ಲಿ ನಡೆದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಪಕ್ಷ ಸಂಘಟನೆ ಬಲಪಡಿಸುವ ಕುರಿತು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.ನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದನಾಪ್ಪ, ಪಾಲಿಕೆ ಸದಸ್ಯ ಎಂ.ಮುನಿಸ್ವಾಮಿ, ಮಾಜಿ ಸಚಿವ ಆರ್.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಶಾಂತಮ್ಮ ಇತರರು ಹಾಜರಿದ್ದರು.ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಸೌಂದರ್ಯ ರಮೇಶ್, ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ ಸದಸ್ಯ ಕೆ.ಮುನಿರಾಜು ಅವರನ್ನು ಅಭಿನಂದಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.