ಸೋಮವಾರ, ನವೆಂಬರ್ 18, 2019
22 °C

ಒಗ್ಗಟ್ಟಿನಿಂದ ಹೋರಾಡಿ: ಮಹಿಳೆಯರಿಗೆ ಸಲಹೆ

Published:
Updated:

ಮಹದೇವಪುರ: `ಆಧುನಿಕ ಜಗತ್ತಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಹಿಂಸೆಗೆ ಪೂರ್ಣವಿರಾಮ ಬೀಳಬೇಕು. ಅದಕ್ಕಾಗಿ ಮಹಿಳೆಯರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು' ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಉಪಕಾರ್ಯದರ್ಶಿ ಕೆ.ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.ಕ್ಷೇತ್ರದ ಕಣ್ಣೂರು ಗ್ರಾಮದ ಸಮೀಪದ ಯರಪ್ಪನಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಹ ಗ್ರಾಮೀಣ ಪ್ರದೇಶದಲ್ಲಿಯೇ ಹೆಚ್ಚಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಬಗ್ಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎಂ.ರಾಮಸ್ವಾಮಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವ ವಿವರಿಸಿದರು.ಜೀವೋದಯ ಟ್ರಸ್ಟ್‌ನ ಫಾದರ್ ಜೆರಾಲ್ಡ್ ವಲ್ಲನ್, ಮಹಿಳಾ ಹೋರಾಟಗಾರ್ತಿ ಶಾಂತಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)