ಒಟ್ಟು 8,794 ಶಿಕ್ಷಕರ ಖಾಲಿ

7

ಒಟ್ಟು 8,794 ಶಿಕ್ಷಕರ ಖಾಲಿ

Published:
Updated:

ಸುವರ್ಣ ವಿಧಾನಸೌಧ (ಬೆಳಗಾವಿ):  ರಾಜ್ಯದಲ್ಲಿ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು 8,794 ಹುದ್ದೆಗಳು ಖಾಲಿ ಇವೆ. ಸೋಮವಾರ ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಪುಟ್ಟಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಮಾಹಿತಿ ಒದಗಿಸಿದರು.ಪ್ರಾಥಮಿಕ ಶಾಲೆಗಳಲ್ಲಿ 4,119, ಪ್ರೌಢಶಾಲೆಗಳಲ್ಲಿ 4,240 ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ 445 ಹುದ್ದೆಗಳು ಖಾಲಿ ಇವೆ. ಹಣಕಾಸು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಆರ್ಥಿಕ ಮಿತವ್ಯಯ ಆದೇಶ ಸಡಿಲಿಸಿ ಹುದ್ದೆಗಳ ಭರ್ತಿಗೆ ಅನುಮತಿ ನೀಡಬೇಕು ಎಂದು ಕೋರಲಾಗಿದೆ ಎಂದರು.ಅನುದಾನಿತ ಪ್ರೌಢಶಾಲೆಗಳಲ್ಲಿ ಈಗಾಗಲೇ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಖಾಲಿಯಾಗಿರುವ ಪದವಿಪೂರ್ವ ಉಪನ್ಯಾಸಕರ  ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದ್ದು ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸಚಿವರು ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry