ಒಡಂಬಡಿಕೆಗೆ ಸಹಿ

7

ಒಡಂಬಡಿಕೆಗೆ ಸಹಿ

Published:
Updated:

ಬರ್ನ್, (ಪಿಟಿಐ): ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಸ್ವಿಟ್ಜರ್ಲೆಂಡ್ ಸರ್ಕಾರಗಳು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದು, ಇದರಿಂದ ಸ್ವಿಸ್ ಬ್ಯಾಂಕುಗಳಲ್ಲಿ ಇಡಲಾಗಿರುವ ಕಪ್ಪು ಹಣದ ಬಗ್ಗೆ ಮಾಹಿತಿ ಪಡೆಯಲು ಭಾರತಕ್ಕೆ ಅನುಕೂಲವಾಗಲಿದೆ. ಸ್ವಿಟ್ಜರ್ಲೆಂಡ್‌ನಲ್ಲಿಯ ಭಾರತದ ರಾಯಭಾರಿ ಚಿತ್ರಾ ನಾರಾಯಣನ್ ಮತ್ತು ಸ್ವಿಸ್ ಹಣಕಾಸು ಖಾತೆಯ ಕಾರ್ಯದರ್ಶಿ ಮೈಕಲ್ ಅಂಬುಹಲ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ್ದಾರೆ.ಈ ಒಪ್ಪಂದವು ದ್ವಿಮುಖ ತೆರಿಗೆ ವ್ಯವಸ್ಥೆಯನ್ನು ರದ್ದುಪಡಿಸಲು ಸಹ ಸಹಕಾರಿಯಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry