ಗುರುವಾರ , ಮೇ 13, 2021
35 °C

ಒಡೆದ ಕಾಲುವೆ: ನೀರು ಪೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾಲಹಳ್ಳಿ: ಇಲ್ಲಿಗೆ ಸಮೀಪದ ಉತ್ತಿನ ಯಲ್ಲಮ್ಮದೇವಸ್ಥಾನದ ಹತ್ತಿರ ಸೋಮವಾರ ನಾರಾಯಣಪೂರ ಬಲದಂಡೆ ಕಾಲುವೆಯ 9ನೇ ವಿತರಣಾ ನಾಲೆಯ ಬಿಡಿ 2ರಲ್ಲಿ ಕಾಲುವೆ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿದೆ.ರೈತರು ಸಾವಿರಾರು ರೂಪಾಯಿ ಸಾಲ ಮಾಡಿ ಬೆಳೆದ ಬೆಳೆಗಳಿಗೆ ಮುಂದಿನ ದಿನಗಳಲ್ಲಿ ನೀರಿನ       ಅಭಾವ ಉಂಟಾಗಿ ತೀವ್ರ ತೊಂದರೆ ಅನುಭವಿಸಬೇಕಾಗಿದೆ.ಈಚೆಗೆ ಈ ನಾಲೆಗೆ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ಥಿ ಹಾಗೂ ಸ್ವಚ್ಚ ಮಾಡಲು ಕಾಮಾಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇಲ್ಲಿಯ ರೈತರು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಸವರಾಜ ತೇಕೂರು ತಿಳಿಸಿದರು.ಸಂಬಂಧಿಸಿದ ಎನ್ನಾರ‌್ಬಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ    ಕಾಲುವೆ ಒಡೆಯಲು ಕಾರಣವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.