ಭಾನುವಾರ, ಜೂನ್ 20, 2021
25 °C

ಒತ್ತುವರಿ ತೆರವಿಗೆ ಕ್ರಮ: ತಹಶೀಲ್ದಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ತಾಲ್ಲೂಕಿನ ಬಸವಾಪುರ ಗ್ರಾಮದಲ್ಲಿ ಒತ್ತುವರಿಯಾಗಿರುವ ಪ್ರದೇಶವನ್ನು ಅತಿ ಶೀಘ್ರದಲ್ಲಿ ತೆರವುಗೊಳಿಸಲಾಗುವುದು ಎಂದು ತಹಶೀಲ್ದಾರ್ ಜಿ.ಎನ್. ಮಂಜುನಾಥ್ ಶನಿವಾರ ಹೇಳಿದರು.

ಬಸವಾಪುರ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ನೆಮ್ಮದಿ ಕೇಂದ್ರದಲ್ಲಿ ನೀಬೇಕು. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವತಿಯಿಂದ ರೈತರಿಗೆ ಅವಶ್ಯಕವಾಗಿ ಬೇಕಾಗುವ ಬಿತ್ತನೆ ಬೀಜಗಳನ್ನು ಈಗಾಗಲೇ ದಾಸ್ತಾನು ಮಾಡಿದ್ದು, ಮುಂಗಾರಿಗೆ ಯಾವುದೇ ತೊಂದರೆಯಾಗದಂತೆ ವಿತರಣೆಯಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.9 ಅರ್ಜಿಗಳನ್ನು ಗ್ರಾಮಸ್ಥರು ನೀಡಿದ್ದು, ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 5, ಪಂಚಾಯಿತಿಗೆ 3 ಹಾಗೂ ಆಹಾರ ಇಲಾಖೆಗೆ 1 ಅರ್ಜಿ ಬಂದಿದ್ದು ಹೆಚ್ಚಾಗಿ ಕುಡಿಯುವ ನೀರಿನ ಸಮಸೆ, ಆರೋಗ್ಯ. ನೈರ್ಮಲ್ಯತೆಗೆ ಸಂಬಂಧಿಸಿದವಾಗಿದ್ದು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಜಯಸಾರಥಿ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಸಾಮಾಜಿಕ ಭದ್ರತೆ ಯೋಜನೆಯಡಿ 10 ಸಾವಿರಗಳಂತೆ 40 ಜನ ಫಲಾನುಭವಿಗಳಿಗೆ ಹಾಗೂ ಅಂತ್ಯ ಸಂಸ್ಕಾರ ಯೋಜನೆಗೆ 150ಕ್ಕೂ ಹೆಚ್ಚು ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು.

ರೇಷ್ಮೆ ಹುಳು ಸಾಕಾಣಿಕೆ ಕೊಠಡಿ ನಿರ್ಮಾಣಕ್ಕೆ ಹಕ್ಕಲಪುರ ಗ್ರಾಮದ ನಂಜಪ್ಪ ಎಂಬ ರೈತನಿಗೆ 75 ಸಾವಿರ ರೂ. ಚೆಕ್ ನೀಡಲಾಯಿತು.ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶಿವಪ್ರಸಾದ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಚಿತ್ರಕುಮಾರಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಜಣ್ಣ, ರೇಷ್ಮೆ ಇಲಾಕೆ ಶಿವಪಾದಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕರಿಮಾದಶೆಟ್ಟಿ, ಸದಸ್ಯ ರಂಗಯ್ಯ ಮುಂತಾದವರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.