ಭಾನುವಾರ, ಏಪ್ರಿಲ್ 11, 2021
32 °C

ಒತ್ತುವರಿ ತೆರವು ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಬಂಬೂ ಬಜಾರ್, ಕೀರ್ತಿನಗರ ಮತ್ತಿತರರ ಕಡೆಗಳಲ್ಲಿ ಅನಧಿಕೃತ ಒತ್ತುವರಿ ಕಟ್ಟಡ ತೆರವುಗೊಳಿಸಿದ್ದನ್ನು ವಿರೋಧಿಸಿ ಕೆಲವರು ಗುರುವಾರ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದರು.ನಗರದ ಅನೇಕ ಕಡೆ ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದರೂ ತೆರವುಗೊಳಿಸದೆ ಬಡಜನರ ಕಟ್ಟಡಗಳನ್ನು ಮಾತ್ರ ಒತ್ತುವರಿ ಮಾಡಲಾಗಿದೆ. ನಗರಸಭೆಯ ಸಿಬ್ಬಂದಿ ಮತ್ತು ತಾಲ್ಲೂಕು ಕಚೇರಿ ಅಧಿಕಾರಿಗಳು ಬಡ ಜನತೆಯ ಮೇಲೆ ಮಾತ್ರ ತಮ್ಮ ದರ್ಪವನ್ನು ತೋರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ತಹಶೀಲ್ದಾರ್ ಕೃಷ್ಣಮೂರ್ತಿ ಕಾರ್ಯನಿಮಿತ್ತ ಕಚೇರಿಗೆ ಬಂದಿರಲಿಲ್ಲ. ನಂತರ ಪ್ರತಿಭಟನಾಕಾರರೇ ಜಿಲ್ಲಾಧಿಕಾರಿಗಳಿಗೆ ದೂರು ನೀಡುವ ತೀರ್ಮಾನ ತೆಗೆದುಕೊಂಡು ಪ್ರತಿಭನೆಯನ್ನು ಮುಕ್ತಾಯಗೊಳಿಸಿದರು.ಈ ಸಂದರ್ಭದಲ್ಲಿ ಅನ್ಯಾಯಕ್ಕೊಳಗಾದವರಿಗೆ ಪರಿಹಾರ ನೀಡುವಂತೆ ಶಿರಸ್ತೆದಾರ್  ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲ್ಲೂಕು ಆಡಳಿತದ ಆದೇಶದ ಮೇರೆಗೆ ಪೊಲೀಸರು ತಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೂ ದೂರು ನೀಡುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಬುಧವಾರವೂ ಕೆಲವರು ತಾಲ್ಲೂಕು ಕಚೇರಿ ಹಾಗೂ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು.ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ, ಸರ್ಕಾರಿ ಆದೇಶದಂತೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಅದರಂತೆ ಕಾರ್ಯ ನಿರ್ವಹಿಸಲಾಗಿದೆ. ಮಾನವೀಯತೆಯ ಆಧಾರದ ಮೇಲೆ ವಾಸದ ಮನೆ ತೆರವುಗೊಳಿಸದೆ ಸಮಯಾವಕಾಶವನ್ನು ನೀಡಲಾಗಿದೆ. ಗುಜರಿ ಸಾಮಾನು  ಹಾಕಿಕೊಂಡಿದ್ದ ಶೆಡ್‌ಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಹಂತ ಹಂತವಾಗಿ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.