ಕೃಷ್ಣರಾಜಪುರ : ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕೊರತೆ ಇದ್ದು ದೂಳು ತುಂಬಿದ ರಸ್ತೆ, ರಸ್ತೆಗಳನ್ನು ಸಮತಟ್ಟು ಮಾಡುವುದು ಸೇರಿದಂತೆ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿಸಿದ ಮಟ್ಟದಲ್ಲಿ ನಡೆದಿಲ್ಲ ಎಂದು ತಹಶೀಲ್ದಾರ್ ಬಿ.ಆರ್.ಹರೀಶ್ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.

ಕೆ.ಆರ್.ಪುರ ಹಿರಿಯರ ವೇದಿಕೆ ಬಸವನಪುರ ಅಮರ ಜ್ಯೋತಿ ಕಾಲೆಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ಥಳೀಯರು ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಸರ್ಕಾರಿ ಜಾಗ ಒತ್ತುವರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ವಾರಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೂ, ಸಾವಿರಾರು ರೂಪಾಯಿ ವಿದ್ಯುತ್ ಬಿಲ್ ಪಾವತಿಸಬೇಕಾಗಿದೆ. ಹೀಗಾಗಿ ಅನಧಿಕೃತ ನೀರು ಪೂರೈಕೆ ಸಂಪರ್ಕವನ್ನು ಸಮಾರೋಪಾದಿಯಲ್ಲಿ ಕಡಿತಗೊಳಿಸಲು ಎರಡು ಜಾಗೃತದಳಗಳನ್ನು ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.