ಶುಕ್ರವಾರ, ಮೇ 14, 2021
32 °C

ಒಪೆಕ್ ಆಸ್ಪತ್ರೆ ಆರಂಭಕ್ಕೆ ಬದ್ಧ: ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಜೀವ್‌ಗಾಂಧಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆ(ಒಪೆಕ್) ಪುನಃ ಆರಂಭಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಒಪೆಕ್ ಆಸ್ಪತ್ರೆ ಆರಂಭಿಸಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು. 

ಭಾನುವಾರ ಇಲ್ಲಿನ ರಾಜೀವ್‌ಗಾಂಧಿ ಸುಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,  ಈ ಭಾಗದ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗುವುದು. ಒಪೆಕ್ ಆಸ್ಪತ್ರೆಯನ್ನು ಸ್ವಾಯತ್ತ ಸಂಸ್ಥೆಯಾಗಿ ಮುಂದುರಿಸುವ ಹಾಗೂ ಸರ್ಕಾರವೇ ನಿರ್ವಹಣೆ ಮಾಡುವ ಕುರಿತು ಸಭೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.ಒಪೆಕ್ ಆಸ್ಪತ್ರೆಯ ನಿರ್ವಹಣೆಗೆ 600 ಜನ ಸಿಬ್ಬಂದಿ ಅವಶ್ಯಕ ಇದ್ದು, ಈಗಾಗಲೇ 200 ಸಿಬ್ಬಂದಿ ನೇಮಕಾತಿಗೆ ಅನುಮತಿ ನೀಡಲಾಗಿದೆ. ಸಂವಿಧಾನ 371(ಜೆ) ಅನುಷ್ಠಾನದ ಕಾನೂನು ರೂಪಿಸುವ ಹಿನ್ನೆಲೆಯಲ್ಲಿ ನೇಮಕಾತಿಗಳನ್ನು ತಡೆಹಿಡಿಯಲಾಗಿದೆ. ಜುಲೈ ಮಧ್ಯದಲ್ಲಿಯೇ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸಂವಿಧಾನ 371(ಜೆ) ಕರಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು.ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ(ರಿಮ್ಸ) ಆಸ್ಪತ್ರೆಯನ್ನು ಎರಡು ತಿಂಗಳಲ್ಲಿ ಆರಂಭಿಸಲಾಗುವುದು. ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ(ರಿಮ್ಸ) ಪರವಾನಗಿಗೆ 520ಬೇಡ್‌ಗಳ ಸಾಮರ್ಥ್ಯದ ಆಸ್ಪತ್ರೆಯ ಅವಶ್ಯಕತೆ ಇತ್ತು. ಅದು ಈಗ ಪೂರ್ಣಗೊಂಡಿದ್ದು, ಇನ್ನು ಎರಡು ತಿಂಗಳಲ್ಲಿ ರಿಮ್ಸ ಆಸ್ಪತ್ರೆ ಆರಂಭವಾಗಲಿದೆ ಎಂದು ಹೇಳಿದರು.ರಾಜ್ಯದ 10 ವೈದ್ಯಕೀಯ ಮಹಾವಿದ್ಯಾಲಯಗಳ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ಅನುದಾನದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಿಬ್ಬಂದಿಗಳ ಕೊರತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಶಾಸಕರಾದ ಡಾ.ಶಿವರಾಜ ಪಾಟೀಲ್, ಹಂಪನಗೌಡ ಬಾದರ್ಲಿ, ಜಿ.ಹಂಪಯ್ಯ ನಾಯಕ, ಪ್ರತಾಪಗೌಡ ಪಾಟೀಲ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ವಸಂತಕುಮಾರ, ರವಿ ಬೋಸರಾಜ, ಹಾಗೂ ಇತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.