ಶನಿವಾರ, ಮೇ 15, 2021
26 °C

ಒಬಿಸಿ ಮೀಸಲು: ಐಐಎಂಸಿಯಲ್ಲಿ ಪ್ರಕ್ರಿಯೆ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತರೆ ಹಿಂದುಳಿದ ಜಾತಿಗಳ (ಒಬಿಸಿ) ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಶೇಕಡ 27ರಷ್ಟು ಮೀಸಲಾತಿ ನೀಡುವ ಪ್ರಕ್ರಿಯೆ ಕೋಲ್ಕತ್ತದ `ಭಾರತೀಯ ನಿರ್ವಹಣಾ ಸಂಸ್ಥೆ~ಯಲ್ಲಿ (ಐಐಎಂಸಿ) ಪೂರ್ಣಗೊಂಡಿದೆ ಎಂದು ಸಂಸ್ಥೆಯ ನಿರ್ದೇಶಕ ಶೇಖರ ಚೌಧರಿ ತಿಳಿಸಿದರು.`ಐಐಎಂಸಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದೆ. ದೇಶದ ಇನ್ನಿತರ ನಿರ್ವಹಣಾ ಸಂಸ್ಥೆಗಳಲ್ಲೂ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದೆ~ ಎಂದು ಅವರು ತಿಳಿಸಿದರು.ಐಐಎಂಸಿಯ ಹಳೆ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕ ಶನಿವಾರ ಇಲ್ಲಿ ಆಚರಿಸಿದ ಸಂಸ್ಥೆಯ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿವರ ನೀಡಿದರು. ರಾಷ್ಟ್ರದ ಉನ್ನತ ಶಿಕ್ಷಣ ಕೇಂದ್ರಗಳ (ಐಐಟಿ ಮತ್ತು ಐಐಎಂ) ಪ್ರವೇಶ ಪ್ರಕ್ರಿಯೆಯಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇಕಡ 27ರಷ್ಟು ಮೀಸಲಾತಿ ನೀಡಬೇಕು ಎಂದು ಕೇಂದ್ರ ಸರ್ಕಾರ 2006ರಲ್ಲಿ ನಿಯಮ ರೂಪಿಸಿತ್ತು.ಕೇಂದ್ರ ಸರ್ಕಾರದ ಈ ನಿಯಮವನ್ನು ಕೆಲವು ಸಂಘಟನೆಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದವು. ಆದರೆ ಸುಪ್ರೀಂ ಕೋರ್ಟ್ 2008ರ ಏಪ್ರಿಲ್ 10ರಂದು ನೀಡಿದ್ದ ತೀರ್ಪಿನಲ್ಲಿ ಸರ್ಕಾರದ ನಿಯಮವನ್ನು ಎತ್ತಿಹಿಡಿದಿತ್ತು. ಐಐಎಂಸಿಯ ನಿರ್ದೇಶಕ ಅಜಿತ್ ಬಾಲಕೃಷ್ಣನ್, ಐಐಎಂಸಿ ಮುಖ್ಯಸ್ಥ ಪ್ರೊ. ಸೌಗತ ರೇ ಅವರು ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.