ಒಳನಾಡಿನಲ್ಲಿ ಮಳೆ

7

ಒಳನಾಡಿನಲ್ಲಿ ಮಳೆ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಕೆ.ಆರ್.ನಗರ ಮತ್ತು ಕೆ.ಆರ್.ಪೇಟೆಯಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 42.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry