ಒಳಮೀಸಲಾತಿ: ಸುಪ್ರೀಂಗೆ ದಾಖಲೆ
ನವದೆಹಲಿ (ಪಿಟಿಐ): ಕೇಂದ್ರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ `ಒಬಿಸಿ~ ವಿದ್ಯಾರ್ಥಿಗಳಿಗೆ ನೀಡಲಾದ ಶೇ 27ರ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಶೇ 4.5 ಒಳ ಮೀಸಲಾತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಮಂಗಳವಾರ ಅಗತ್ಯ ದಾಖಲೆಗಳನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂಕೋರ್ಟ್ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿತ್ತು.
ನ್ಯಾಯಾಲಯದ ಆದೇಶದ ಅನ್ವಯ ಹೆಚ್ಚುವರಿ ಸಾಲಿಸಿಟರ್ ಜನರಲ್ ಗೌರವ್ ಬ್ಯಾನರ್ಜಿ ಅವರು ನ್ಯಾಯಮೂರ್ತಿ ಕೆ.ಎಸ್.ರಾಧಾಕೃಷ್ಣನ್ ಮತ್ತು ಜೆ.ಎಸ್. ಕೇಹರ್ ಅವರನ್ನೊಳಗೊಂಡ ಪೀಠಕ್ಕೆ ಸೂಕ್ತ ದಾಖಲೆಗಳನ್ನು ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.