ಒಳ್ಳೆಯ ವ್ಯಕ್ತಿತ್ವ ಬೆಳೆಸಿಕೊಳ್ಳಲು ಕರೆ

7

ಒಳ್ಳೆಯ ವ್ಯಕ್ತಿತ್ವ ಬೆಳೆಸಿಕೊಳ್ಳಲು ಕರೆ

Published:
Updated:

ಗುಲ್ಬರ್ಗ:  ವೈಜ್ಞಾನಿಕ ಯುಗದಲ್ಲಿ ವಿದ್ಯಾರ್ಥಿಗಳು ಅವಕಾಶಗಳನ್ನು ಕಳೆದುಕೊಳ್ಳಬಾರದು. `ಸಮಾನ ಅವಕಾಶ ಕೇಂದ್ರ~ ಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಒಳ್ಳೆಯ ಅಡಿಪಾಯ ಹಾಕುತ್ತವೆ ಎಂದು ಕಮಲಾಪುರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಕಲ್ಯಾಣರಾವ ಪಾಟೀಲ ಹೇಳಿದರು.ಇಲ್ಲಿನ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾನುವಾರ ವಿವಿ ಅನುದಾನ ಆಯೋಗದ 11ನೇ ಯೋಜನೆಯ ಅಡಿಯಲ್ಲಿ `ಸಮಾನ ಅವಕಾಶಗಳ ಕೇಂದ್ರ~ವನ್ನು ಉದ್ಘಾಟಿಸಿ ಮಾತನಾಡಿದರು.ಅಜಯರಾಜ ಇಂಗ್ಲಿಷ್ ಕಲಿಕೆಯ ಕೇಂದ್ರದ ಮುಖ್ಯಸ್ಥ ರಾಜಶೇಖರ ಬಿ. `ಇಂಗ್ಲಿಷ್ ಭಾಷೆಯಲ್ಲಿ ವ್ಯವಹಾರ ಜ್ಞಾನ~ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಬಸವರಾಜ ಎವಲೇ ವಹಿಸಿದ್ದರು. ಡಾ. ಲತಾದೇವಿ ಕರಿಕಲ್, ಕಾಲೇಜಿನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry