ಸೋಮವಾರ, ಮೇ 23, 2022
30 °C

ಓಟದ ಸ್ಪರ್ಧೆಯಲ್ಲಿ ವಿಜೇತರಾದ ಚಿಣ್ಣರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ರಾಯಚೂರಿನಲ್ಲಿ ಇತ್ತೀಚೆಗೆ ನಡೆದ ನೆಟ್ಟಕಲ್ಲಪ್ಪ ಸ್ಮಾರಕ ರಸ್ತೆ ಓಟದ ಸ್ಪರ್ಧೆಯಲ್ಲಿ ನಗರದ ಪೂರ್ಣಪ್ರಜ್ಞಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಬಹುಮಾನಗಳ್ನು ಗಳಿಸಿದ್ದಾರೆ.ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿ ವಿ.ಓಂಶ್ರೀ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರೆ, ವಿದ್ಯಾರ್ಥಿ ಎಸ್.ತೇಜಸ್ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಇಬ್ಬರು ವಿಜೇತರನ್ನು ಅಭಿನಂದಿಸಿದ ತರಬೇತುದಾರ ಮುಷ್ತಾಕ್ ಅಹಮದ್, `ಇಂತಿಂಥ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಕ್ಕಳಿಗೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಅವರು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಬೆಳೆಯುವ ಆಸಕ್ತಿಯಿದ್ದರೆ, ಅವರನ್ನು ಪ್ರೋತ್ಸಾಹಿಸಬೇಕು' ಎಂದರು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಅಥ್ಲೆಟಿಕ್ ಕ್ಲಬ್‌ನ ಪದಾಧಿಕಾರಿಗಳಾದ ಎನ್.ಸುಭಾಷ್, ಆಚಾರ್, ಶ್ರೀನಿವಾಸ್ ಮತ್ತು ರಾಜಶೇಖರ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.