ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನಗರದ ಯಶವಂತಪುರದಿಂದ ಎರ್ನಾಕುಲಂಗೆ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ನೈರುತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

`ಗರೀಬ್ರಥ್ ಎಕ್ಸ್ಪ್ರೆಸ್~ ವಿಶೇಷ ರೈಲು ಶನಿವಾರ (ಆ.25) ರಾತ್ರಿ 11.15ಕ್ಕೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಭಾನುವಾರ ಮಧ್ಯಾಹ್ನ 12.15ಕ್ಕೆ ಎರ್ನಾಕುಲಂ ರೈಲು ನಿಲ್ದಾಣವನ್ನು ತಲುಪಲಿದೆ.
`ಯಶವಂತಪುರದಿಂದ ಹೊರಡುವ ರೈಲು ಬಾಣಸವಾಡಿ, ಹೊಸೂರು, ಧರ್ಮಪುರಿ, ಸೇಲಂ, ಈರೋಡ್, ತಿರುಪತ್ತೂರು, ಕೊಯಮತ್ತೂರು ಮತ್ತು ತ್ರಿಶೂರ್ ಮಾರ್ಗವಾಗಿ ಸಾಗಿ ಎರ್ನಾಕುಲಂ ತಲುಪಲಿದೆ~ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಇದೇ ರೈಲು ಭಾನುವಾರ ಮಧ್ಯಾಹ್ನ 3.30ಕ್ಕೆ ಎರ್ನಾಕುಲಂನಿಂದ ಬೆಂಗಳೂರಿಗೆ ವಾಪಸ್ ಹೊರಟು ಸೋಮವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಯಶವಂತಪುರ ರೈಲು ನಿಲ್ದಾಣಕ್ಕೆ ಬರಲಿದೆ. ಈ ವಿಶೇಷ ರೈಲಿನಲ್ಲಿ ಹೆಚ್ಚುವರಿ ಸಾಮರ್ಥ್ಯದ ಹದಿನಾರು ಎಸಿ ಬೋಗಿಗಳು ಮತ್ತು ಎರಡು ಲಗೇಜ್ ಬೋಗಿಗಳಿರುತ್ತವೆ.

`ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ ವಿಶೇಷ ರೈಲು ಸೋಮವಾರ ಬೆಳಿಗ್ಗೆ 9.15ಕ್ಕೆ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಬಾಣಸವಾಡಿ, ಕೆ.ಆರ್.ಪುರ, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪತ್ತೂರು, ಕೊಯಮತ್ತೂರು, ಪಲಕ್ಕಾಡ್, ಒಟ್ಟಪಾಲಂ ಮತ್ತು ತ್ರಿಶೂರ್ ಮಾರ್ಗವಾಗಿ ರಾತ್ರಿ 9.30ಕ್ಕೆ ಎರ್ನಾಕುಲಂ ತಲುಪಲಿದೆ. ಇದೇ ರೈಲು ಸೋಮವಾರ ರಾತ್ರಿ 11 ಗಂಟೆಗೆ ಎರ್ನಾಕುಲಂನಿಂದ ಹೊರಟು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಯಶವಂತಪುರ ರೈಲು ನಿಲ್ದಾಣಕ್ಕೆ ಬರಲಿದೆ. ಆ.27 ಮತ್ತು ಸೆ.3ರಂದು ಈ ರೈಲಿನ ವಿಶೇಷ ಸೇವೆ ಇರುತ್ತದೆ~ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.