ಓಣಂ ಸಡಗರ

ಗುರುವಾರ , ಮೇ 23, 2019
24 °C

ಫಲಿತಾಂಶ (ಮುನ್ನಡೆ+ಗೆಲುವು) 0/542

ಓಣಂ ಸಡಗರ

Published:
Updated:

ಎಂ ಎಸ್ ರಾಮಯ್ಯ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜು ಸಾಂಸ್ಕೃತಿಕ ವೈವಿಧ್ಯಕ್ಕೆ ಹೆಸರುವಾಸಿ. ಇಲ್ಲಿ ದೇಶದ ವಿವಿಧೆಡೆಯ ವಿದ್ಯಾರ್ಥಿಗಳು ಕಲಿಯುತ್ತಿರುವ ಕಾರಣ ನಾನಾ ಭಾಗಗಳ ಹಬ್ಬ ಹರಿದಿನಗಳನ್ನು ಆಚರಿಸುವ ಮೂಲಕ ಭಾವೈಕ್ಯತೆ ಮೆರೆಯಲಾಗುತ್ತದೆ.ಈಚೆಗೆ ಕೇರಳದ ಸಾಂಪ್ರದಾಯಿಕ ಓಣಂ ಹಬ್ಬವನ್ನೂ ಇಲ್ಲಿ ಉಪನ್ಯಾಸಕ ಸುನೀಲ್ ಕೋಡ್ಕಣಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾರಿ ಸಂಭ್ರಮದಿಂದ ಆಚರಿಸಿದರು.ಜತೆಗೆ ವಿಘ್ನವಿನಾಶಕ ಗಣೇಶನ ಮೂರ್ತಿಯನ್ನೂ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು. ಕರ್ನಾಟಕ ಮತ್ತು ಕೇರಳದ ಘಮಘಮಿಸುವ ಅಡುಗೆಗಳು, ಸುಂದರವಾದ ಅಲಂಕಾರ, ರಂಗೋಲಿ ಮತ್ತು ಪೂಕಳಂ ಅಂದಿನ ಆಚರಣೆಗೆ ಮೆರುಗು ನೀಡಿದವು.ಇದೇ ಸಂದರ್ಭದಲ್ಲಿ ನಡೆದ ಸಾಂಪ್ರದಾಯಿಕ ಉಡುಗೆ ಸ್ಪರ್ಧೆಯಲ್ಲಿ ಸುಚಿತ್ರಾ ಮತ್ತು ಕೈಲಾಸ್ ಸುತಾರ್‌ಗೆ  ಕ್ರಮವಾಗಿ ಮಿಸ್ ಮತ್ತು ಮಿಸ್ಟರ್ ಎಥ್ನಿಕ್ ಪ್ರಶಸ್ತಿ ದೊರೆಯಿತು. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry