ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಪಠ್ಯ-ಪುಸ್ತಕದ ಶಿಕ್ಷಣದ ಜೊತೆಗೆ ದೈಹಿತ ಅಭ್ಯಾಸಕ್ಕೂ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಅಭ್ಯಾಸ ಮತ್ತು ಕ್ರೀಡಾಕೂಟ ಮುಖ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ.ಪವಾರ್ ತಿಳಿಸಿದರು.

ನಗರದ ಎಸ್ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಏಕವಲಯ ಗುಡ್ಡಗಾಡು ಓಟದ ಸ್ಪರ್ಧೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬುದ್ಧಿಶಕ್ತಿಯ ಜೊತೆಜೊತೆಗೆ ದೈಹಿಕ ಶ್ರಮಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ದೈಹಿಕ ಪರಿಶ್ರಮಪಟ್ಟಲ್ಲಿ ಕ್ರೀಡಾಕೂಟಗಳಲ್ಲಿ ಜಯ ಸಾಧಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಾಂಶುಪಾಲ ಟಿ.ಮುನಿಕೆಂಚೇಗೌಡ, ಕುಲಸಚಿವ ಬಿ.ಕೆ..ಉಮೇಶ್, ಉಪನ್ಯಾಸಕರಾದ ಪ್ರೊ. ವಿಜಯಕುಮಾರ್, ಡಾ. ಜಿ.ಗೋಪಾಲರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.