ಸೋಮವಾರ, ಮೇ 17, 2021
26 °C

ಓರಿಯನ್ಸ್ ಸ್ಪೋರ್ಟ್ಸ್ ಕ್ಲಬ್‌ಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತಮ ಪ್ರದರ್ಶನ ತೋರಿದ ಓರಿಯನ್ಸ್ ಸ್ಪೋರ್ಟ್ಸ್ ಕ್ಲಬ್ ತಂಡ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ಎಸ್.ರಂಗರಾಜನ್ ಸ್ಮಾರಕ ಟೂರ್ನಿಯ `ಸಿ' ಡಿವಿಷನ್ ಲೀಗ್ ಚಾಂಪಿಯನ್‌ಷಿಪ್‌ನ ಭಾನುವಾರದ ಪಂದ್ಯದಲ್ಲಿ 62-53 ಪಾಯಿಂಟ್‌ಗಳಿಂದ ಡಿಆರ್‌ಡಿಒ ಎದುರು ಗೆದ್ದು ನಾಕ್‌ಔಟ್ ಹಂತವನ್ನು   ಪ್ರವೇಶಿಸಿತು.ಕಂಠೀರವ ಹೊರಾಂಗಣ ಕ್ರೀಡಾಂಗಣದ ಕೋರ್ಟ್‌ನಲ್ಲಿ ನಡೆದ ಪಂದ್ಯದ ಮೊದಲಾರ್ಧ ಕೊನೆಗೊಂಡಾಗ ಉಭಯ ತಂಡಗಳು 27-27ರಲ್ಲಿ ಸಮಬಲ ಸಾಧಿಸಿದ್ದವು. ಆದರೆ ಓರಿಯನ್ಸ್ ತಂಡದ ಪವನ್ (20) ಹಾಗೂ ಸುಹಾಸ್ (17) ಉತ್ತಮ ಪ್ರದರ್ಶನ ತೋರಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.