ನೆಲಮಂಗಲ: ಕೆಎಸ್ಆರ್ಟಿಸಿ ಬಸ್ಸೊಂದು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ಘಟನೆ ಇಲ್ಲಿನ ಕುಣಿಗಲ್ ವೃತ್ತದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಈ ಅಪಘಾತದಲ್ಲಿ ಬಸ್ ಚಾಲಕ ಲೋಕೇಶ್ (38), ಚಿಕ್ಕಮಗಳೂರಿನ ಹೇಮಾವತಿ (55), ಈಕೆಯ ಮಗ ವಸಂತ (25) ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಕಡೆಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಕುಣಿಗಲ್ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಾಮಫಲಕದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದರು. ಮೂವರಿಗೆ ತೀವ್ರ ಗಾಯಗಳಾಗಿದ್ದು, ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.