ಗುರುವಾರ , ಮೇ 19, 2022
20 °C

ಕಗ್ಗಂಟಾಗಿ ಉಳಿದ ಅಭ್ಯರ್ಥಿಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಿ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಇಂದು

ಯಾದಗಿರಿ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾ ವಣೆ ಬುಧವಾರ (ಫೆ.3) ಮಧ್ಯಾಹ್ನ 3 ಗಂಟೆಗೆ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಅಂತಿಮ ಕಸರತ್ತು ತೀವ್ರಗೊಂಡಿದೆ.ಸಾಮಾನ್ಯ ಮಹಿಳೆಗೆ ಮೀಸಲಾಗಿ ರುವ ಅಧ್ಯಕ್ಷ ಸ್ಥಾನಕ್ಕೆ ಗೋಗಿ ಕೆ. ಕ್ಷೇತ್ರದ ಬಸವರಾಜೇಶ್ವರಿ ಹಾಗೂ ಕೊಂಕಲ್ ಕ್ಷೇತ್ರದ ಅನುಸೂಯಾ ಬೋರಬಂಡ್ ನಡುವೆ ಪೈಪೋಟಿ ನಡೆಯುತ್ತಿದೆ.ಇನ್ನೊಂದೆಡೆ ದೇವತ್ಕಲ್ ಕ್ಷೇತ್ರದ ಶರಣಮ್ಮ ಸಾಹುಕಾರ ಪರ ಕೂಡ ಸಾಕಷ್ಟು ಒತ್ತಡಗಳು ಕೇಳಿ ಬರುತ್ತಿವೆ.ಶಾಸಕರಾದ ಡಾ.ಎ.ಬಿ. ಮಾಲಕರೆಡ್ಡಿ, ಬಾಬುರಾವ ಚಿಂಚನ ಸೂರ, ಶರಣಬಸಪ್ಪ ದರ್ಶನಾಪುರ, ಮಾಜಿ ಸಚಿವ ರಾಜಾ ವೆಂಕಟಪ್ಪ ನಾಯಕ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್ ನೇತೃತ್ವದಲ್ಲಿ ನಡೆದ ಜಿ.ಪಂ. ಸದಸ್ಯರ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳುವುದು ಸಾಧ್ಯವಾಗಲಿಲ್ಲ.ಗುರುಮಠಕಲ್ ಮತಕ್ಷೇತ್ರಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಚಿಂಚನ ಸೂರ ಪಟ್ಟು ಹಿಡಿದಿದ್ದರೆ, ಶಹಾಪುರ ತಾಲ್ಲೂಕಿಗೆ ಪ್ರಾತಿನಿಧ್ಯ ನೀಡುವಂತೆ ಶರಣಬಸಪ್ಪ ದರ್ಶನಾಪುರ ಹಾಗೂ ಸುರಪುರ ತಾಲ್ಲೂಕಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ರಾಜಾ ವೆಂಕಟಪ್ಪ ನಾಯಕ ಒತ್ತಡ ಹೇರಿದ್ದರಿಂದ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವುದು ಸಾಧ್ಯವಾಗಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.ಈಗಾಗಲೇ ಸುರಪುರ ತಾಲ್ಲೂಕಿ ನವರು ಅಧ್ಯಕ್ಷರಾಗಿರುವುದರಿಂದ ಯಾದಗಿರಿ ತಾಲ್ಲೂಕಿಗೆ ಪ್ರಾತಿನಿಧ್ಯ ನೀಡಬೇಕು ಎಂಬ ಒತ್ತಾಯ ಒಂದೆಡೆ ಯಾದರೆ, ಶಹಾಪುರ ತಾಲ್ಲೂಕಿನವರೂ ತಾವು ಹಿಂದೆ ಬೀಳುವುದಿಲ್ಲ ಎನ್ನು ತ್ತಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಷಯ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.ಸಾಮಾನ್ಯರಿಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಸೈದಾಪುರ ಕ್ಷೇತ್ರದ ಸದಸ್ಯ ಶರಣೀಕಕುಮಾರ ದೋಖಾ ಅವರ ಆಯ್ಕೆ ಬಹುತೇಕ ಖಚಿತಗೊಂಡಂತಾಗಿದೆ. ಆದರೆ ಅಧ್ಯಕ್ಷ ಸ್ಥಾನ ಯಾರಿಗೆ ದೊರೆಯಲಿದೆ ಎನ್ನುವುದರ ಮೇಲೆ ಉಪಾಧ್ಯಕ್ಷ ಸ್ಥಾನದ ಭವಿಷ್ಯ ನಿರ್ಧಾರವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಜಿಲ್ಲಾ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನಕ್ಕೆ ಒಮ್ಮತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾ ಗಿದ್ದು, ಕೆಪಿಸಿಸಿಗೂ ಈ ವಿಷಯ ಮುಟ್ಟಿದೆ ಎಂದು ಹೇಳಲಾಗುತ್ತಿದೆ. ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅಂತಿಮ ವಾಗಿ ಯಾರೂ ಕಣದಲ್ಲಿ ಉಳಿಯ ಬೇಕು ಎನ್ನುವುದು ಮಾತ್ರ ಮಧ್ಯಾಹ್ನವೇ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.