ಶುಕ್ರವಾರ, ನವೆಂಬರ್ 15, 2019
22 °C

ಕಟ್ಟಡದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

Published:
Updated:

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೊದಲ ಮಹಡಿಯಿಂದ ಕೆಳಗೆ ಬಿದ್ದು ವಿಕಾಸ್ (20) ಎಂಬ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹುಳಿಮಾವು ಗೇಟ್ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.ಅಸ್ಸಾಂ ಮೂಲದ ವಿಕಾಸ್, ಮೂರು ತಿಂಗಳ ಹಿಂದೆ ನಗರಕ್ಕೆ ಬಂದಿದ್ದರು. ಮೊದಲು ಎಲೆಕ್ಟ್ರಾನಿಕ್‌ಸಿಟಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ವಾರದ ಹಿಂದಷ್ಟೆ ಹುಳಿಮಾವು ಗೇಟ್ ಬಳಿ ನಿರ್ಮಾಣವಾಗುತ್ತಿರುವ ಕಟ್ಟಡದಲ್ಲಿ ಕೆಲಸಕ್ಕೆ ಸೇರಿದ್ದರು. ಬೆಳಿಗ್ಗೆ ಒಂಬತ್ತು ಗಂಟೆ ಸುಮಾರಿಗೆ ಮೊದಲ ಮಹಡಿಯಲ್ಲಿ ಕೆಲಸ ಮಾಡುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ.

ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದ ಅವರನ್ನು ಸಹ ಕಾರ್ಮಿಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವಿಕಾಸ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.ಘಟನೆ ಸಂಬಂಧ ನಿವೇಶನದ ವ್ಯವಸ್ಥಾಪಕ ಹಾಗೂ ಕಟ್ಟಡದ ಮೇಸ್ತ್ರಿ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹುಳಿಮಾವು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)