ಮಂಗಳವಾರ, ಜೂನ್ 15, 2021
21 °C
ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕಟ್ಟಡ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕಟ್ಟಡ ನಿರ್ಮಾಣ ಸಂಸ್ಥೆ ‘ಡಿ.ಎಸ್.ಮ್ಯಾಕ್ಸ್’ ಕಚೇರಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸುರಕ್ಷತಾ ದಿನದ ಕಾರ್ಯ­ಕ್ರಮದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿ­ಕ­ರಿಗೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲಾಯಿತು.ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇ­­ಶಕ ಎಸ್.ಪಿ.ದಯಾನಂದ್‌ ಧ್ವಜಾರೋಹಣ ನೆರವೇರಿಸಿದರು. ನಂತರ ಕಾರ್ಮಿಕರಿಗೆ ಕಟ್ಟಡ ಸುರಕ್ಷ­ತೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರದರ್ಶನ ನಡೆಯಿತು.ಕಟ್ಟಡ ಕಾರ್ಮಿಕರು ಕೆಲಸದ ಸಂದರ್ಭ­ದಲ್ಲಿ ವಹಿಸ­ಬೇಕಾದ ಸುರ­ಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕೆ­ಗಳ ಬಗ್ಗೆ ತಜ್ಞರು ಉಪನ್ಯಾಸ ನೀಡಿ­ದರು. ಜತೆಗೆ ಕಾರ್ಮಿಕ­ರೊಂದಿಗೆ ತಜ್ಞರ ಸಂವಾದ ನಡೆಯಿತು. ಕಾರ್ಮಿ­ಕರು ತಮಗಿರುವ ಹಲವು ಅನುಮಾನ ಸಂದೇಹಗಳಿಗೆ ಪ್ರಶ್ನೆಗಳನ್ನು ಕೇಳಿ ತಜ್ಞರಿಂದ ಉತ್ತರಗಳನ್ನು ಪಡೆದರು.ಕಾರ್ಯಕ್ರಮದಲ್ಲಿ ಸುಮಾರು ಮೂರು ಸಾವಿರ ಮಂದಿ ಕಾರ್ಮಿಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗ­ವಾಗಿ ಕೆಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.