ಸೋಮವಾರ, ಮೇ 17, 2021
22 °C

ಕಟ್ಟಡ ನಿರ್ಮಾಣಕ್ಕೆ ಅಡ್ಡಿ:ಬಿಬಿಎಂಪಿ ಸದಸ್ಯನ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕಟ್ಟಡವೊಂದರ ನಿರ್ಮಾಣಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಶಾಂತಲಾನಗರ ವಾರ್ಡ್‌ನ ಬಿಬಿಎಂಪಿ ಸದಸ್ಯ ಕೆ.ಶಿವಕುಮಾರ್ ಅವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ.ಈ ಸಂಬಂಧ ಆದಿತ್ಯ ರಹೇಜಾ ಎಂಬುವರು ದೂರು ನೀಡಿದ್ದಾರೆ. ವಿಠಲ್‌ಮಲ್ಯ ರಸ್ತೆಯಲ್ಲಿ ಆದಿತ್ಯ ಅವರು ಹೋಟೆಲ್ ನಿರ್ಮಿಸುತ್ತಿದ್ದು, ಮಾ.29 ಹಾಗೂ ಏ.4 ಮತ್ತು 5 ರಂದು ಕಟ್ಟಡ ನಿರ್ಮಾಣ ಸ್ಥಳಕ್ಕೆ ಬಂದ ಶಿವಕುಮಾರ್ ಹಾಗೂ ಅವರ ಸಹಚರರು ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಬೆದರಿಸಿ ನಿರ್ಮಾಣಕ್ಕೆ ಬಳಸುತ್ತಿದ್ದ ಏಳು ಲಕ್ಷ ರೂಪಾಯಿ ಮೌಲ್ಯದ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ದೂರನ್ನು ಆಧರಿಸಿ ಶಿವಕುಮಾರ್ ಹಾಗೂ ಅವರ ಸಹಚರರ ವಿರುದ್ಧ ಪ್ರಾಣ ಬೆದರಿಕೆ, ಕಳವು ಮತ್ತಿತರ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.