ಕಟ್ಟಡ ನಿರ್ಮಾಣ: ಕಾರ್ಯಾದೇಶ ಪತ್ರ ನೀಡಿಕೆಗೆ ನಿರ್ಧಾರ

7

ಕಟ್ಟಡ ನಿರ್ಮಾಣ: ಕಾರ್ಯಾದೇಶ ಪತ್ರ ನೀಡಿಕೆಗೆ ನಿರ್ಧಾರ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಕೋಲಾರ ಸ್ನಾತಕೋತ್ತರ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಇದೇ 7ರೊಳಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು.ಸರ್ಕಾರ ಸೆ. 26ರಂದು ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಸಿಂಡಿಕೇಟ್ ಸಮಿತಿಯು ಕೋಲಾರದಲ್ಲಿ ಸ್ನಾತಕೋತ್ತರ ಕೇಂದ್ರ ಕಟ್ಟಡದ ನಿರ್ಮಾಣ ಕಾರ್ಯವನ್ನು ಈ ಹಿಂದೆ ಮಾಡಿಕೊಳ್ಳಲಾದ ಒಡಂಬಡಿಕೆಯಂತೆ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದೆ.ಅದರಂತೆ ವಿ.ವಿ ಎಂಜಿನಿಯರ್, ಇದೇ 7ರೊಳಗೆ ಗುತ್ತಿಗೆದಾರರಿಗೆ ಕಾರ್ಯಾದೇಶ ಪತ್ರ ನೀಡಬೇಕು.  ಒಪ್ಪಂದದ ಹೊರತಾಗಿ ಗುತ್ತಿಗೆದಾರರಿಗೆ ಮುಂಗಡವಾಗಿ ಹಣ ನೀಡುವಂತಿಲ್ಲ. ಕಾಮಗಾರಿ ವಿಳಂಬವಾದರೆ ಅದನ್ನು ಗಂಭೀರವಾಗಿ ಪರಿಗಣಿಸಿ ಗುತ್ತಿಗೆ ಒಪ್ಪಂದದ ಪ್ರಕಾರ ಕ್ರಮ ಜರುಗಿಸುವ ನಿರ್ಣಯ ಕೈಗೊಳ್ಳಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಈ ನಿರ್ಣಯಗಳಿಗೆ ಒಂಬತ್ತು ಮಂದಿ ಸದಸ್ಯರು ಅನುಮೋದನೆ ನೀಡಿದರೆ, ನಾಲ್ಕು ಮಂದಿ ವಿರೋಧ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry