ಬೆಂಗಳೂರು: ಸಂಜಯನಗರದ ಗೆದ್ದಲಹಳ್ಳಿಯ ಬಳಿ ಇರುವ ಮನೆಗಳನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹೈಕೋರ್ಟ್ ಗುರುವಾರ ದಂಡ ವಿಧಿಸಿ ಆದೇಶಿಸಿದೆ.
ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಪ್ರತಿ ಅರ್ಜಿದಾರನಿಗೆ ಈ ದಂಡದ ಹಣವನ್ನು ಪರಿಹಾರದ ರೂಪದಲ್ಲಿ ನೀಡಬೇಕು ಎಂದು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ಆದೇಶಿಸಿದ್ದಾರೆ. ತಾರಸಿ ಮನೆ ಹೊಂದಿದ್ದವರಿಗೆ ತಲಾ 2ಲಕ್ಷ ಹಾಗೂ ಷೀಟ್ ಮನೆ ಹೊಂದಿದ್ದವರಿಗೆ ತಲಾ ಒಂದು ಲಕ್ಷ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಬೇಕು ಎಂದು ಅವರು ಸೂಚಿಸಿದ್ದಾರೆ.
ನೋಟಿಸ್ ಕೂಡ ನೀಡದೇ ಮನೆ ನೆಲಸಮ ಮಾಡುತ್ತಿರುವುದನ್ನು ಪ್ರಶ್ನಿಸಿ ಶ್ರೀನಾಥ ಹೆಗಡೆ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ. 1978ರಲ್ಲಿ ಈ ಜಾಗವನ್ನು ಬಿಡಿಎ ಸ್ವಾಧೀನಪಡಿಸಿಕೊಂಡಿತ್ತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.