ಭಾನುವಾರ, ಜೂನ್ 7, 2020
23 °C

ಕಟ್ಟಾಳುಗಳ ನ್ಯಾಯಾಂಗ ಬಂಧನ ನವೆಂಬರ 26 ರ ವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಟ್ಟಾಳುಗಳ ನ್ಯಾಯಾಂಗ ಬಂಧನ ನವೆಂಬರ 26 ರ ವರೆಗೆ ವಿಸ್ತರಣೆ

ಬೆಂಗಳೂರು (ಪಿಟಿಐ): ಭೂ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ಅವರ ಪುತ್ರ, ಪಾಲಿಕೆ ಸದಸ್ಯ ಕಟ್ಟಾ ಜಗದೀಶ ಹಾಗೂ ಇಟಾಸ್ಕಾ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಎಸ್.ವಿ.ಶ್ರೀನಿವಾಸ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಬುಧವಾರ ನವೆಂಬರ್ 26ರ ವರೆಗೆ ವಿಸ್ತರಿಸಿದೆ.ಈ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯು ಬುಧವಾರ ಕೊನೆಗೊಂಡ ಹಿನ್ನೆಲೆಯಲ್ಲಿ, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ನ್ಯಾಯಾಂಗ ಬಂಧನದ ಅವಧಿಯನ್ನು ಈಗ ನವೆಂಬರ್ 26ರ ವರೆಗೆ ವಿಸ್ತರಿಸಿ ಆದೇಶ ನೀಡಿದರು. 

ಇದಕ್ಕೂ ಮೊದಲು ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಕ್ಯಾನ್ಸರ್ ಕಾಯಿಲೆಗೆ  ಹೆಚ್ಚಿನ ಚಿಕಿತ್ಸೆ ಪಡೆಯಲು  ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾದ ಬಗ್ಗೆ  ಜೈಲು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.