ಬುಧವಾರ, ಏಪ್ರಿಲ್ 14, 2021
23 °C

ಕಡಪ ಕ್ಷೇತ್ರ:ಸ್ಪರ್ಧೆಗೆ ಕಾಂಗ್ರೆಸ್ ಅಭ್ಯರ್ಥಿ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ):  ಕಡಪಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ವೈ.ಎಸ್.ಜಗನ್‌ಮೋಹನ್ ರೆಡ್ಡಿ ವಿರುದ್ಧ ಸ್ಪರ್ಧಿಸಲು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ನಿರಾಕರಿಸಿದ್ದಾರೆ.ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಚುನಾವಣೆಯಲ್ಲಿ ಪ್ರತಿಷ್ಠೆಯ ವಿಷಯವನ್ನಾಗಿಸಿಕೊಂಡು ಅಭ್ಯರ್ಥಿಯ ಶೋಧಲ್ಲಿ ತೊಡಗಿದೆ. ಆದರೆ ಆ ಪಕ್ಷಕ್ಕೆ ಅರ್ಹ ಅಭ್ಯರ್ಥಿಗಳೇ ಸಿಕ್ಕಿಲ್ಲ. ಗುರುವಾರ ಮಧ್ಯಾಹ್ನವಷ್ಟೇ ಪಕ್ಷ ಸೇರಿದ ಕಂಡುಲಾ ರಾಜಮೋಹನ ರೆಡ್ಡಿ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿ, ಅವರ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿತು. ಆದರೆ ರಾತ್ರಿ ವೇಳೆಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯನ್ನೇ ತೋರಲಿಲ್ಲ. ಸೋದರ  ಶಿವಾನಂದ ರೆಡ್ಡಿ ಕೂಡ ಆಸಕ್ತಿ ತೋರಲಿಲ್ಲ.ಪಕ್ಷ ಸೇರಿದ ಕೂಡಲೇ ಚುನಾವಣೆ ಎದುರಿಸಲು ಸರಿಯಲ್ಲ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಶಿವಾನಂದ ರೆಡ್ಡಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವವರೆಗೆ ಜಗನ್ ಪ್ರತಿಸ್ಪರ್ಧಿಯಾಗಲು ರಾಜಮೋಹನ್ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.