ಕಡಲತೀರ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

7

ಕಡಲತೀರ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

Published:
Updated:
ಕಡಲತೀರ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

ಕಾರವಾರ: ಮಾತಾ ಅಮೃತಾನಂದಮಯಿ (ಅಮ್ಮ) ಅವರ 60ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಸದಾಶಿವಗಡದ ಅಮೃತಾ ವಿದ್ಯಾಲಯದ ವಿದ್ಯಾರ್ಥಿಗಳು ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸಿದರು.ಸೆ. 27-28ರಂದು ಕೇರಳದ ಅಮೃತಪುರಿಯಲ್ಲಿ ಅಮ್ಮನ ಜನ್ಮದಿನಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಸೆ. 1ರಂದು `ಶುಚಿತ್ವ ಆಂದೋಲನ'ವನ್ನು ಹಮ್ಮಿಕೊಂಡಿದ್ದು, ನಗರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಡಲತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ಗಳನ್ನು ಆಯ್ದು ಕಸದಬುಟ್ಟಿಗೆ ತುಂಬಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry