ಮಂಗಳವಾರ, ಸೆಪ್ಟೆಂಬರ್ 29, 2020
27 °C

ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಾಣ

ಕೆಂಗೇರಿ: `ಗುಡಿಸಲುಮುಕ್ತ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಕಡಿಮೆ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ವಸತಿ ಇಲಾಖೆ ಬದ್ಧ~ ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.ನಾಯಂಡನಹಳ್ಳಿಯಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿಯು ನಿರ್ಮಿಸಿರುವ ವಸತಿ ಮನೆಗಳ ಫಲಾನುಭವಿಗಳು ಇತ್ತೀಚೆಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಪಾಲಿಕೆ ಮಾಜಿ ಉಪಮೇಯರ್ ಲಕ್ಷ್ಮಿನಾರಾಯಣ, ಪಾಲಿಕೆ ಸದಸ್ಯೆ ರಾಜೇಶ್ವರಿ ಬೆಳಗೋಡ್, ವಿಶ್ವನಾಥಗೌಡ, ಕೊಳಚೆ ನಿರ್ಮೂಲನ ಮಂಡಳಿಯ ನಿರ್ದೇಶಕ ಕೋದಂಡರಾಮ, ಗುತ್ತಿಗೆದಾರ ರಾಧಾಕೃಷ್ಣ, ಮುಖಂಡರಾದ ಕೆ.ಮರಿಯಪ್ಪ, ಶಿವಕಾಂತಪ್ಪ, ಅಂಜುಮಣಿ ಉಪಸ್ಥಿತರಿದ್ದರು.ಬಡ ಮಹಿಳೆಯರಿಗೆ ಸೀರೆಯನ್ನು ಉಚಿತವಾಗಿ ವಿತರಿಸಲಾಯಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.