ಶುಕ್ರವಾರ, ಏಪ್ರಿಲ್ 16, 2021
20 °C

ಕಡೂರು: ಮಾಂಸದ ಅಂಗಡಿ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಡೂರು: ಪಟ್ಟಣದ ಜನವಸತಿ ಪ್ರದೇಶದಲ್ಲಿ ತೆರೆಯಲಾಗಿದ್ದ ಕೋಳಿ ಮತ್ತು ಮಾಂಸದ ಅಂಗಡಿಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ತೆರವುಗೊಳಿಸಿರುವುದಾಗಿ  ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ತಿಳಿಸಿದರು.ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯ ದೃಷ್ಟಿಯಿಂದ ಈ ಹಿಂದೆ ಕಡೂರಿನ ಹಳೆ ಸಂತೆ ಮೈದಾನದಲ್ಲಿ ಕೋಳಿ ಮತ್ತು ಮಾಂಸದ ಅಂಗಡಿಗಳನ್ನು ತೆರೆಯಲು ಮಳಿಗೆಗಳನ್ನು ಹರಾಜು ಮೂಲಕ ನೀಡಲಾಗಿತ್ತು.ಕಾನೂನು ಉಲ್ಲಂಘಿಸಿ ಪಟ್ಟಣದ ಒಳ ಭಾಗದಲ್ಲಿ ಅಂಗಡಿಗಳನ್ನು ತೆರೆದಿದ್ದರಿಂದ ಸಾರ್ವಜನಿಕ ಹಿತಾಸಕ್ತಿಯ ಪ್ರಕರಣ ನ್ಯಾಯಾಲಯದಲ್ಲಿ ದಾಖಲಾಗಿತ್ತು.ಅನಧಿಕೃತ ಅಂಗಡಿಗಳನ್ನು ಮುಚ್ಚಿಸುವಂತೆ ನ್ಯಾಯಾಲಯ  ಪುರಸಭೆ ಮುಖ್ಯಾಧಿಕಾರಿಗೆ ಆದೇಶ ನೀಡಿದ್ದರಿಂದ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಅಂಗಡಿಗಳನ್ನು ಮುಚ್ಚಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.