ಬುಧವಾರ, ಮೇ 12, 2021
19 °C

ಕಡೆಂಗೋಡ್ಲು ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಎಂಜಿಎಂ ಕಾಲೇಜಿನ ಆಶ್ರಯದಲ್ಲಿ ನೀಡಲಾಗುವ 2011ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯನ್ನು ಕವಿ ಚಿದಾನಂದ ಸಾಲಿ ಅವರಿಗೆ    ಶನಿವಾರ ಪ್ರದಾನ ಮಾಡಲಾಯಿತು.ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಂ ಪ್ರಶಸ್ತಿ ಪ್ರದಾನ ಮಾಡಿದರು.ಅತಿಥಿಯಾಗಿದ್ದ ಸಾಹಿತಿ ಪ್ರೊ. ಎ.ವಿ.ನಾವಡ ಮಾತನಾಡಿ, `ಕಡೆಂಗೋಡ್ಲು ಶಂಕರ ಭಟ್ ಅವರ ಕವನಗಳನ್ನು ಮರು ಓದಿಗೆ ಬಳಸಿಕೊಳ್ಳಬೇಕು. ಪತ್ರಿಕೋದ್ಯಮಿಯಾಗಿದ್ದ ಅವರ 40 ವರ್ಷಗಳ ಸಮಗ್ರ ಸಂಪಾದಕೀಯವನ್ನು ಆಕರ ಗ್ರಂಥವಾಗಿ ಪ್ರಕಟಿಸಬೇಕು. ಇದು ಕನ್ನಡಕ್ಕೆ ನೀಡುವ ಬಹು ದೊಡ್ಡ ಕೊಡುಗೆಯಾಗುತ್ತದೆ~ ಎಂದರು.

 

ಚಿದಾನಂದ ಸಾಲಿ ಅವರ ಪ್ರಶಸ್ತಿ ಪುರಸ್ಕತ ಕೃತಿ `ರೆ~  ಕವನ ಸಂಕಲನ ಬಿಡುಗಡೆ ಮಾಡಲಾಯಿತು.ಪ್ರಶಸ್ತಿಯ ಬೆಳ್ಳಿಹಬ್ಬದ ಸಂಭ್ರಮದ ಅಂಗವಾಗಿ 1979ರಿಂದ ಪ್ರಶಸ್ತಿ ಪುರಸ್ಕತರು ಹಾಗೂ ತೀರ್ಪುಗಾರರನ್ನು ಅಭಿನಂದಿಸಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.